ಬಳ್ಳಾರಿ: ಕಲುಷಿತ ನೀರು ಕುಡಿದು 40 ಮಂದಿ ಅಸ್ವಸ್ಥ

ಕಲುಷಿತ ನೀರು ಕುಡಿದ ಬಳ್ಳಾರ ಜಿಲ್ಲೆ ಹೊಸಪೇಟೆ ತಾಲೂಕಿನ ಕಕುಬಾಲು ಗ್ರಾಮದ ಸುಮಾರು 40 ಮಂದಿ ಅಸ್ವಸ್ಥಗೊಂಡಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಳ್ಳಾರಿ: ಕಲುಷಿತ ನೀರು ಕುಡಿದ ಬಳ್ಳಾರ ಜಿಲ್ಲೆ ಹೊಸಪೇಟೆ ತಾಲೂಕಿನ ಕಕುಬಾಲು ಗ್ರಾಮದ ಸುಮಾರು 40 ಮಂದಿ ಅಸ್ವಸ್ಥಗೊಂಡಿದ್ದಾರೆ.

ಗ್ರಾಮದ ಜನ ಕಲುಷಿತ ನೀರು ಕುಡಿದ ಪರಿಣಾಮ ವಾಂತಿಯಿಂದ ನರಳುತ್ತಿದ್ದು, ಅವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಜಿಂದಾಲ್ ಸಂಜೀವಿನಿ ಮೊಬೈಲ್ ಕ್ಲಿನಿಕ್ ಗ್ರಾಮಕ್ಕೆ ಆಗಮಿಸಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ. ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ 3 ದಿನಗಳಿಂದ ಗ್ರಾಮದ ಜನರು ಡಯೇರಿಯಾದಿಂದ ಬಳಲುತ್ತಿದ್ದರು. ಅಸ್ವಸ್ಥಗೊಂಡಿದ್ದವರ ಪರಿಸ್ಥಿತಿ ಶನಿವಾರ ರಾತ್ರಿ ಮತ್ತಷ್ಟು ಉಲ್ಬಣಗೊಂಡಿದೆ ಎಂದು ತಿಳಿಸಿದ್ದಾರೆ.

ಗ್ರಾಮದಲ್ಲಿರುವ ಮೂರು ಬೋರ್ ವೆಲ್ ಗಳ ನೀರು ಕಲುಷಿತಗೊಂಡಿದೆ. ಸುತ್ತಮುತ್ತಲಿನ 12 ಗ್ರಾಮಗಳ ಜನರು ಕಲುಷಿತ ಗೊಂಡಿರುವ ನೀರನ್ನು ಕುಡಿಯುತ್ತಿದ್ದಾರೆ. ಗ್ರಾಮದಲ್ಲಿ ಶುದ್ದ ಕುಡಿಯುವ ನೀರು ನೀಡಲು ಗ್ರಾಮ ಪಂಚಾಯತ್ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಲುಷಿತ ನೀರು ಕುಡಿದು ಗ್ರಾಮದ ಜನತೆ ಅಸ್ವಸ್ಥಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com