
ನವದೆಹಲಿ: ಅಮೆರಿಕದ ಫ್ಲೋರಿಡಾದಲ್ಲಿ ಆಯೋಜಿಸಲಾಗಿರುವ ಪುಟ್ಟ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ಹಾಗೂ ಕಳಪೆ ಫಾರ್ಮ್ ನಿಂದ ಬಳಲುತ್ತಿರುವ ಸುರೇಶ್ ರೈನಾರನ್ನು ತಂಡದಿಂದ ಕೈಬಿಡಲಾಗಿದೆ.
ಇದೇ ಆಗಸ್ಟ್ 27ರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ತಂಡವನ್ನು ಎಂಎಸ್ ಧೋನಿ ಮುನ್ನಡೆಸಲಿದ್ದಾರೆ. ಇನ್ನು ಭಾರತದಲ್ಲಿ ದುಲೀಪ್ ಟ್ರೋಫಿ ಆಯೋಜನೆಯಾಗಿರುವ ಹಿನ್ನಲೆಯಲ್ಲಿ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾ ಟಿ20 ಸರಣಿಗೆ ಅಲಭ್ಯರಾಗಲಿದ್ದಾರೆ. ದುಲೀಪ್ ಟ್ರೋಫಿಯಲ್ಲಿ ಸುರೇಶ್ ರೈನಾ ಭಾರತ ರೆಡ್ ತಂಡವನ್ನು ಹಾಗೂ ಯುವರಾಜ್ ಸಿಂಗ್ ಭಾರತ ಗ್ರೀನ್ ತಂಡವನ್ನು ಪ್ರತಿನಿಧಿಸುತ್ತಿದ್ದು, ಇದೇ ಕಾರಣಕ್ಕೆ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ.
ಉಳಿದಂತೆ ದುಲೀಪ್ ಟ್ರೋಫಿಯಲ್ಲಿ ಪಾಲ್ಗೊಳ್ಳುತ್ತಿರುವ ಹಾರ್ಧಿಕ್ ಪಾಂಡ್ಯ, ಪವನ್ ನೇಗಿ, ಹರ್ಭಜನ್ ಸಿಂಗ್, ಆಶೀಶ್ ನೆಹ್ರಾ ಹಾಗೂ ಮನೀಶ್ ಪಾಂಡೆ ಕೂಡ ಟಿ20 ಸರಣಿಯಿಂದ ಕೈಬಿಡಲಾಗಿದೆ.
ಟಿ20 ಸರಣಿಗೆ ಆಯ್ಕೆಯಾಗಿರುವ ಟಿ20 ತಂಡದ ಪಟ್ಟಿ ಇಲ್ಲಿದೆ.
ಎಂಎಸ್ ಧೋನಿ (ನಾಯಕ), ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಅಜಿಂಕ್ಯಾ ರಹಾನೆ, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಆರ್ ಆಶ್ವಿನ್, ಜಸ್ಪ್ರೀತ್ ಭುಮ್ರಾಹ್, ಮಹಮದ್ ಶಮಿ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಅಮಿತ್ ಮಿಶ್ರಾ, ಸ್ಟುವರ್ಟ್ ಬಿನ್ನಿ
Advertisement