

ದುಬೈ: ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಟೀಂ ಇಂಡಿಯಾದ ಉಪನಾಯಕ ಅಜಿಂಕ್ಯಾ ರಹಾನೆ ಅವರು ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಬಿಡುಗಡೆ ಮಾಡಿರುವ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಅಜಿಂಕ್ಯಾ ರಹಾನೆ 11ನೇ ಸ್ಥಾನದಿಂದ 8ನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಇನ್ನು ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ದಾಖಲಿಸಿದ್ದ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಂತರ ಎರಡನೇ ಹಾಗೂ ಮೂರನೇ ಪಂದ್ಯದಲ್ಲಿ ಕಳಪೆ ಫಾರ್ಮ್ ನಿಂದಾಗಿ 13ನೇ ಸ್ಥಾನದಿಂದ 16ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ನಲ್ಲಿ ಉತ್ತಮವಾಗಿ ಆಡುತ್ತಿರುವ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಅಗ್ರ ಸ್ಥಾನದಲ್ಲಿದ್ದಾರೆ.
ಟೆಸ್ಟ್ ಬೌಲಿಂಗ್ ವಿಭಾಗದಲ್ಲಿ ಟೀಂ ಇಂಡಿಯಾದ ಟಾಪ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಆಲ್ ರೌಂಡರ್ ವಿಭಾಗದಲ್ಲೂ ಅಶ್ವಿನ್ ಮೊದಲ ಸ್ಥಾನದಲ್ಲಿದ್ದಾರೆ.
ಟೆಸ್ಟ್ ಟಾಪ್ 10 ಬ್ಯಾಟ್ಸ್‌ಮನ್‌ಗಳು
ಸ್ಟೀವನ್ ಸ್ಮಿತ್, ಜೋ ರೂಟ್, ಕೇನ್ ವಿಲಿಯಂಸನ್, ಹಾಸಿಮ್ ಆಮ್ಲಾ, ಯೂನಿಸ್ ಖಾನ್, ಆ್ಯಡಂ ಹೋಗ್ಸ್, ಎಬಿಡಿ ವಿಲಿಯರ್ಸ್, ಅಜಿಂಕ್ಯಾ ರಹಾನೆ, ರಾಸ್ ಟೇಲರ್ ಮತ್ತು ಕುಕ್.