ಪ್ರಮೋದ್ ಮಧ್ವರಾಜ್
ಪ್ರಮೋದ್ ಮಧ್ವರಾಜ್

ಕ್ರೀಡೆಗಳಲ್ಲಿ ಭಾಗವಹಿಸುವ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್: ಪ್ರಮೋದ್ ಮಧ್ವರಾಜ್

ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಗ್ರೇಸ್‌ಮಾರ್ಕ್ಸ್, ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಹೊಸ ಕ್ರೀಡಾ ನೀತಿ...

ಬೆಂಗಳೂರು: ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಗ್ರೇಸ್‌ಮಾರ್ಕ್ಸ್, ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಹೊಸ ಕ್ರೀಡಾ ನೀತಿ ರೂಪಿಸುವುದಾಗಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮುಂಬರುವ ಅಕ್ಟೋಬರ್‌ ವೇಳೆಗೆ ಸಮಗ್ರ ಕ್ರೀಡಾ ನೀತಿ ರೂಪಿಸಲಾಗುವುದು ಎಂದು ಹೇಳಿರುವ ಅವರು ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕ್ರೀಡಾ ನೀತಿ ರೂಪಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಸೆಪ್ಟೆಂಬರ್‌ ನಲ್ಲಿ ಈ ನೀತಿಗೆ ಜನಾಭಿಪ್ರಾಯ ಸಂಗ್ರಹಿಸಲು ರಾಜ್ಯದ ಐದು ಕಡೆ ಅಭಿಪ್ರಾಯ ಸಂಗ್ರಹಣಾ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಮಕ್ಕಳು ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಬೇಕಾದರೆ ಶಾಲಾ ಮಟ್ಟದಿಂದಲೇ ಅವರಿಗೆ ಪ್ರೋತ್ಸಾಹ ನೀಡಬೇಕು. ಆದರೆ, ತಮ್ಮ ಮಕ್ಕಳು ಕ್ರೀಡಾಕೂಟಗಳಲ್ಲಿ ಭಾಗವಹಿಸಿದರೆ ಶೈಕ್ಷಣಿಕವಾಗಿ ಹಿಂದುಳಿಯುತ್ತಾರೆ. ಕಡಿಮೆ ಅಂಕ ಪಡೆಯುತ್ತಾರೆ ಎಂಬ ಭಾವನೆ ಪೋಷಕರಲ್ಲಿದೆ.ಇದನ್ನು ದೂರವಾಗುವಂತೆ ಮಾಡಲು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಗ್ರೇಸ್‌ ಮಾರ್ಕ್ಸ್ ನೀಡುವ ಬಗ್ಗೆ
ಕ್ರೀಡಾನೀತಿಯಲ್ಲಿ ಪ್ರಸ್ತಾಪಿಸಲಾಗುವುದು ಎಂದರು.

Related Stories

No stories found.

Advertisement

X
Kannada Prabha
www.kannadaprabha.com