ಆಸ್ಟ್ರೇಲಿಯಾ ವಿರುದ್ಧದ 3ನೇ ಪಂದ್ಯದ ನಂತರ ಏಕದಿನ ಕ್ರಿಕೆಟ್​ಗೆ ದಿಲ್ಶಾನ್ ವಿದಾಯ

ಆಸ್ಟ್ರೇಲಿಯ ವಿರುದ್ಧದ ಮೂರನೇ ಪಂದ್ಯದ ನಂತರ ಶ್ರೀಲಂಕಾ ಕ್ರಿಕೆಟ್ ತಂಡದ ಭರವಸೆಯ ಆರಂಭಿಕ ಆಟಗಾರ ತಿಲಕರತ್ನೆ ದಿಲ್ಶಾನ್ ಅವರು...
ತಿಲಕರತ್ನೆ ದಿಲ್ಶಾನ್
ತಿಲಕರತ್ನೆ ದಿಲ್ಶಾನ್
ನವದೆಹಲಿ: ಆಸ್ಟ್ರೇಲಿಯ ವಿರುದ್ಧದ ಮೂರನೇ ಪಂದ್ಯದ ನಂತರ ಶ್ರೀಲಂಕಾ ಕ್ರಿಕೆಟ್ ತಂಡದ ಭರವಸೆಯ ಆರಂಭಿಕ ಆಟಗಾರ ತಿಲಕರತ್ನೆ ದಿಲ್ಶಾನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೊಷಿಸಲಿದ್ದಾರೆ ಎಂದು ಲಂಕಾ ಕ್ರಿಕೆಟ್ ಸಂಸ್ಥೆ ಗುರುವಾರ ತಿಳಿಸಿದೆ.
39 ವರ್ಷದ ದಿಲ್ಶಾನ್ ಅವರು ಡಂಬುಲಾದಲ್ಲಿ ಆಗಸ್ಟ್ 28ರಂದು ನಡೆಯುವ ಆಸ್ಟ್ರೇಲಿಯ ವಿರುದ್ಧ ಮೂರನೇ ಪಂದ್ಯವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಎಂದು ಶ್ರಿಲಂಕಾ ಕ್ರಿಕೆಟ್ ಸಂಸ್ಥೆ ಹೇಳಿದೆ. ಅಲ್ಲದೆ ಆರಂಭಿಕ ಆಟಗಾರನ ನಿವೃತ್ತಿ ಜೀವನಕ್ಕೆ ಶುಭ ಕೋರಿದೆ.
ಅಕ್ಟೋಬರ್ 2013 ರಲ್ಲಿ ಟೆಸ್ಟ್ ಪಂದ್ಯಗಳಿಗೆ ವಿದಾಯ ಹೇಳಿದ್ದರು. ಒಟ್ಟು 87 ಟೆಸ್ಟ್ ಪಂದ್ಯಗಳನ್ನು ಆಡಿರುವ ದಿಲ್ಶಾನ್ 5, 492 ರನ್ ಗಳಿಸಿದ್ದಾರೆ. ಅಲ್ಲದೆ ಟೆಸ್ಟ್ ನಲ್ಲಿ 39 ವಿಕೆಟ್ ಪಡೆದಿದ್ದಾರೆ.
ಭಾನುವಾರ ಆಸ್ಟ್ರೇಲಿಯಾ ವಿರುದ್ಧ ನಡೆಯುವ ಏಕದಿನ ಪಂದ್ಯ ಅವರ 330ನೇ ಪಂದ್ಯವಾಗಲಿದ್ದು, ಏಕದಿನ ಪಂದ್ಯಗಳಲ್ಲಿ ಒಟ್ಟು 10,248 ರನ್ ಗಳಿಸಿದ್ದಾರೆ. ಅಲ್ಲದೆ 106 ವಿಕೆಟ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com