ಟ್ರೆಂಟ್ ಬ್ರಿಡ್ಜ್: ಪಾಕಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 444 ರನ್ ಸಿಡಿಸಿ ವಿಶ್ವದಾಖಲೆ ಸೃಷ್ಟಿಸಿದೆ.
2006 ರಲ್ಲಿ ನೆದರ್ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ 443 ರನ್ ಗಳಿಸಿ ಏಕದಿನ ಪಂದ್ಯದಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ತಂಡವಾಗಿತ್ತು. ಇದೀಗ 444 ರನ್ ಗಳಿಸುವ ಮೂಲಕ ಇಂಗ್ಲೆಂಡ್ ಹೊಸ ವಿಶ್ವ ದಾಖಲೆ ಬರೆದಿದೆ.
ಇಂಗ್ಲೆಂಡ್ ಪರ ಅಲೆಕ್ಸ್ ಹೆಲ್ಸ್ 171 ರನ್, ಜೋಸ್ ಬಟ್ಲರ್ 90, ರೂಟ್ 85 ರನ್ ಸಿಡಿಸಿದ್ದಾರೆ.
ಇಂಗ್ಲೆಂಡ್ ನೀಡಿದ 444 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಪಾಕಿಸ್ತಾನ 275 ರನ್ ಗಳಿಗೆ ಸರ್ಪಪತನ ಕಂಡಿದೆ.