

ನವದೆಹಲಿ: ಕ್ರಿಕೆಟಿಗ ಯುವರಾಜ್ ಸಿಂಗ್ ಹಾಗೂ ನಟಿ ಹೇಜಲ್ ಕೀಚ್ ಮದುವೆ ಆರತಕ್ಷತೆಗೆ ಹಾಜರಾಗುವ ಮೂಲಕ ಟೀಂ ಇಂಡಿಯಾ ನಾಯಕ ಧೋನಿ ವಿವಾದಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಇತ್ತೀಚೆಗೆ ಚಂಡೀಘಡದಲ್ಲಿ ನಡೆದ ವಿವಾಹ ಕಾರ್ಯಕ್ರಮಕ್ಕೆ ಧೋನಿ ಗೈರಾದ ಕುರಿತು ಸುದ್ದಿಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಯುವಿ ಆಯ್ಕೆ ಕುರಿತಂತೆ ನಾಯಕ ಧೋನಿ ಅವರನ್ನು ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಅವರು ಸಾಕಷ್ಟು ಬಾರಿ ಮಾಧ್ಯಮಗಳಲ್ಲಿ ಬಹಿರಂಗವಾಗಿ ಟೀಕೆ ಮಾಡಿದ್ದರು. ಇದರಿಂದ ಕೋಪಗೊಂಡಿರುವ ಧೋನಿ ಯುವಿ ಮುದುವೆಗೆ ಗೈರಾಗಿದ್ದಾರೆ ಎಂದು ಸುದ್ದಿ ಬಿತ್ತರವಾಗಿತ್ತು.
ಆದರೆ ಯುವಿ-ಹೇಜಲ್ ಮದುವೆ ಆರತಕ್ಷತೆಗೆ ಹಾಜರಾಗುವ ಮೂಲಕ ಧೋನಿ ಈ ಎಲ್ಲ ವಿವಾದಗಳಿಗೆ ತೆರೆ ಎಳೆದಿದ್ದಾರೆ. ಪತ್ನಿ ಸಾಕ್ಷಿ ಸಮೇತರಾಗಿ ಕಾರ್ಯಕ್ರಮಕ್ಕೆ ಹಾಜರಾದ ಧೋನಿ ನವದಂಪತಿಗಳನ್ನು ಹರಿಸಿದ್ದಾರೆ. ಧೋನಿ-ಸಾಕ್ಷಿಯಂತೆಯೇ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸೌರವ್ ಗಂಗೂಲಿ, ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್, ಮಾಜಿ ಕ್ರಿಕೆಟಿಗ ಕಪಿಲ್ ದೇವ್, ಯುವಿ ಗೆಳೆಯ ಹಾಗೂ ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
ಇನ್ನು ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿತ್ತಾದರೂ ಅವರು ಬೇರೆ ಕಾರ್ಯಕ್ರಮಕ್ಕೆ ತೆರಳಿದ್ದರಿಂದ ಅವರು ಗೈರಾಗಿದ್ದರು.