

ಮುಂಬೈ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಮುರಳಿ ವಿಜಯ್ ಶತಕ ಸಿಡಿಸಿದ್ದಾರೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ನ ಮೂರನೇ ದಿನದಾಟದಲ್ಲಿ ಮುರಳಿ ವಿಜಯ್ 136 ರನ್ ಸಿಡಿಸಿ ಔಟಾಗಿದ್ದಾರೆ. ಇದರೊಂದಿಗೆ ತಮ್ಮ ಟೆಸ್ಟ್ ಬದುಕಿನಲ್ಲಿ ಮುರಳಿ ವಿಜಯ್ 8ನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ಸದ್ಯ ಭಾರತ ಪರ 46 ಟೆಸ್ಟ್ ಪಂದ್ಯವನ್ನಾಡುತ್ತಿರುವ ಮುರಳಿ ವಿಜಯ್ ಒಟ್ಟು 8 ಶತಕ ಮತ್ತು 14 ಅರ್ಧ ಶತಕ ಸಿಡಿಸಿದ್ದಾರೆ.