4ನೇ ಟೆಸ್ಟ್: 631 ರನ್ ಗೆ ಟೀಂ ಇಂಡಿಯಾ ಆಲೌಟ್, 231 ರನ್ ಮುನ್ನಡೆ

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 631 ರನ್ ಗಳಿಗೆ ಆಲೌಟ್ ಆಗಿದ್ದು 231 ರನ್ ಗಳ ಮುನ್ನಡೆ ಪಡೆದಿದೆ...
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 
ಮುಂಬೈ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 631 ರನ್ ಗಳಿಗೆ ಆಲೌಟ್ ಆಗಿದ್ದು 231 ರನ್ ಗಳ ಮುನ್ನಡೆ ಪಡೆದಿದೆ. 
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ ಇಂಗ್ಲೆಂಡ್ 400 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ ಟೀಂ ಇಂಡಿಯಾ 631 ರನ್ ಗಳಿಗೆ ಆಲೌಟ್ ಆಗಿದ್ದು 231 ರನ್ ಗಳ ಮುನ್ನಡೆ ಪಡೆದಿದೆ. 
ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 24, ಮುರಳಿ ವಿಜಯ್ 136, ಚೇತೇಶ್ವರ ಪೂಜಾರ 47, ವಿರಾಟ್ ಕೊಹ್ಲಿ 235,  ಜಯಂತ್ ಯಾದವ್ 104 ರನ್ ಗಳಿಸಿದ್ದಾರೆ. 
ಇಂಗ್ಲೆಂಡ್ ಪರ ರಶೀದ್ 4, ಮೊಹಿನ್ ಅಲಿ ಮತ್ತು ರೂಟ್ ತಲಾ 2 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com