ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಬದುಕಿನ 3ನೇ ದ್ವಿಶತಕ ಬಾರಿಸಿದ ಬೆನ್ನಲ್ಲೇ ಅವರಿಗೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದ್ದು, ಇದೇ ನಿರ್ವಹಣೆ ತೋರಿದರೆ ಮುಂದಿನ ಕೆಲವೇ ವರ್ಷಗಳಲ್ಲಿ ಕೊಹ್ಲಿ ವಿಶ್ವದ ಸರ್ವಶ್ರೇಷ್ಠ ಬ್ಯಾಟ್ಸ್ ಮನ್ ಎನಿಸಿಕೊಳ್ಳಲಿದ್ದಾರೆ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.