ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟೀಂ ಇಂಡಿಯಾ

ಇಂಗ್ಲೆಂಡ್ ವಿರುದ್ಧದ ಸರಣಿ ಜಯದ ನಂತರ ಟೀಂ ಇಂಡಿಯಾ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದೆ...
ಟೀಂ ಇಂಡಿಯಾ
ಟೀಂ ಇಂಡಿಯಾ

ದುಬೈ: ಇಂಗ್ಲೆಂಡ್ ವಿರುದ್ಧದ ಸರಣಿ ಜಯದ ನಂತರ ಟೀಂ ಇಂಡಿಯಾ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ 4-0 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದೆ. ಒಟ್ಟಾರೆ 120 ಅಂಕಗಳೊಂದಿಗೆ ಟೀಂ ಇಂಡಿಯಾ ಅಗ್ರಸ್ಥಾನದಲ್ಲಿದ್ದು 105 ಅಂಕಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ಭಾರತ ವಿರುದ್ಧದ ಸರಣಿ ಸೋಲಿನ ನಂತರ 101 ಅಂಕಗಳೊಂದಿಗೆ ಐದನೇ ಸ್ಥಾನಕ್ಕೆ ಕುಸಿದಿದೆ.

ಟಾಪ್ 10 ಪಟ್ಟಿ
ಭಾರತ(120), ಆಸ್ಟ್ರೇಲಿಯಾ(105), ಪಾಕಿಸ್ತಾನ(102), ದಕ್ಷಿಣ ಆಫ್ರಿಕಾ(102), ಇಂಗ್ಲೆಂಡ್(101), ನ್ಯೂಜಿಲೆಂಡ್(96), ಶ್ರೀಲಂಕಾ(96), ವೆಸ್ಟ್ ಇಂಡೀಸ್(69), ಬಾಂಗ್ಲಾದೇಶ(65), ಜಿಂಬಾಬ್ವೆ(5).

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com