ಐಸಿಸಿ ಅವಾರ್ಡ್ಸ್ 2016: ಆರ್ ಅಶ್ವಿನ್ ಮುಡಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ಗರಿ

ಪ್ರತಿಷ್ಠಿತ ಐಸಿಸಿ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಭಾರತದ ಆಲ್ ರೌಂಡರ್ ಆರ್ ಅಶ್ವಿನ್ ಅವರಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ಒಲಿದು ಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದುಬೈ: ಪ್ರತಿಷ್ಠಿತ ಐಸಿಸಿ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಭಾರತದ ಆಲ್ ರೌಂಡರ್ ಆರ್ ಅಶ್ವಿನ್ ಅವರಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ಒಲಿದು ಬಂದಿದೆ.

ಆರ್ ಅಶ್ವಿನ್ ಇತ್ತೀಚೆಗೆ ಮುಕ್ತಾಯವಾದ ಇಂಗ್ಲೆಂಡ್ ವಿರುದ್ಧ ಸರಣಿ ಹಾಗೂ ಅದಕ್ಕೂ ಮೊದಲು ನಡೆದ ನ್ಯೂಜಿಲೆಂಡ್ ವಿರುದ್ಧದ ಸರಣಿ ಸೇರಿದಂತೆ ಇಡೀ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿರುವ ಹಿನ್ನಲೆಯಲ್ಲಿ ಅವರಿಗೆ ವರ್ಷದ  ಕ್ರಿಕೆಟಿಗ ಪ್ರಶಸ್ತಿ ಒಲಿದುಬಂದಿದೆ. ಅಂತೆಯೇ ಅವರಿಗೆ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿ ನೀಡಜಿ ಗೌರವಿಸಲಾಗುತ್ತದೆ.

ದಕ್ಷಿಣ ಆಫ್ರಿಕಾದ ಡಿಕಾಕ್ ಅವರಿಗೆ ಐಸಿಸಿ ವರ್ಷದ ಏಕದಿನ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿ ಒಲಿದುಬಂದಿದ್ದು, ಬಾಂಗ್ಲಾದೇಶದ ಮುಸ್ತಫಿಜುರ್ ರೆಹಮಾನ್ ಅವರಿಗೆ ವರ್ಷದ ಅತ್ಯುತ್ತಮ ಉದಯೋನ್ಮುಖ ಕ್ರಿಕೆಟಿಗ ಪ್ರಶಸ್ತಿಗೆ  ಪಾತ್ರರಾಗಿದ್ದಾರೆ. ಏಪ್ರಿಲ್ ನಲ್ಲಿ ನಡೆದ ಟಿ20 ವಿಶ್ಪಕಪ್ ನಲ್ಲಿ ಮುಸ್ತಫಿಜುರ್ ಉತ್ತಮ ಪ್ರದರ್ಶನ ನೀಡಿದ್ದರು. ಇನ್ನು ವರ್ಷದ ಅತ್ಯುತ್ತಮ ಪ್ರದರ್ಶನ ಪ್ರಶಸ್ತಿಗೆ ವೆಸ್ಟ್ ಇಂಡೀಸ್ ನ ಕಾರ್ಲೋಸ್ ಬ್ರಾಥ್ ವೇಟ್ ಆಯ್ಕೆಯಾಗಿದ್ದು, 2016  ಏಪ್ರಿಲ್ 3 ರಂದು ಕೋಲ್ಕತಾದ ಈಡನ್ ಗಾರ್ಡನ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ವಿಂಡೀಸ್ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದರು. ಈ ಪ್ರದರ್ಶನಕ್ಕೆ ಅವರಿಗೆ  ವರ್ಷದ ಅತ್ಯುತ್ತಮ ಪ್ರದರ್ಶನ ಪ್ರಶಸ್ತಿ ಒಲಿದುಬಂದಿದೆ.

ಅಂತೆಯೇ ಆಫ್ಘಾನಿಸ್ತಾನದ ಮಹಮದ್ ಶಹಜಾದ್ ಐಸಿಸಿ ಅಫಿಲಿಯೇಟ್ ಕ್ರಿಕೆಟರ್ ಆಫ್ ದಿ ಇಯರ್ ಪ್ರಶಸ್ತಿಗೆ ಭಾಜನರಾಗಿದ್ದು, ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಅಂಪೈರ್ ಮರೇಸ್ ಎರಾಸ್ಮಸ್ ಅವರು ವರ್ಷದ  ಅತ್ಯುತ್ತಮ ತೀರ್ಪುಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಐಸಿಸಿ ಪ್ರಶಸ್ತಿಗೆ ಪಾತ್ರರಾಗಿರುವ ಆಟಗಾರರ ಪಟ್ಟಿ ಇಂತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com