

ಬೆಂಗಳೂರು: ಕಳಪೆ ಪ್ರದರ್ಶನದಿಂದ ಕಂಗೆಟ್ಟಿದ್ದ ಟೀಂ ಇಂಡಿಯಾದ ಆರ್ ಅಶ್ವಿನ್ ಗೆ ಗಾಯವಾಗಿದ್ದು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ.
ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ನಡೆಯುತ್ತಿದ್ದ ತರಬೇತಿ ವೇಳೆ ಆರ್ ಅಶ್ವಿನ್ ಅವರ ಬಲಗೈ ಬೆರಳಿಗೆ ಗಾಯವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ.
ಅಶ್ವಿನ್ ಬೆರಳಿಗೆ ಗಾಯವಾದ ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸಣ್ಣಮಟ್ಟಿನ ಗಾಯವಾಗಿದೆ. ಗಾಯದ ಪ್ರಮಾಣ ಎಷ್ಟಿದೆ ಎನ್ನುವುದು ಇನ್ನಷ್ಟೆ ತಿಳಿಯಬೇಕಿದೆ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.