ಟಿ20ಯಲ್ಲಿ 18ನೇ ಶತಕ ಸಿಡಿಸಿ ಗೇಲ್ ವಿಶ್ವದಾಖಲೆ

ಕೆರಿಬಿಯನ್ ಪ್ರಿಮಿಯರ್ ಲೀಗ್ ಟಿ20 ಕ್ರಿಕೆಟ್ ನಲ್ಲಿ ವೆಸ್ಟ್ ಇಂಡೀಸ್ ನ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಟ್ರಿನ್ ಬಾಗೊ ನೈಟ್ ತಂಡದ ವಿರುದ್ಧ 18ನೇ ಶತಕ ಸಿಡಿಸುವ...
ಕ್ರಿಸ್ ಗೇಯ್ಲ್
ಕ್ರಿಸ್ ಗೇಯ್ಲ್
Updated on: 

ಜಮೈಕಾ: ಕೆರಿಬಿಯನ್ ಪ್ರಿಮಿಯರ್ ಲೀಗ್ ಟಿ20 ಕ್ರಿಕೆಟ್ ನಲ್ಲಿ ವೆಸ್ಟ್ ಇಂಡೀಸ್ ನ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಟ್ರಿನ್ ಬಾಗೊ ನೈಟ್ ತಂಡದ ವಿರುದ್ಧ 18ನೇ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಮಾಡಿದ್ದಾರೆ.

ಜಮೈಕಾ ತಲ್ವಾಸ್ ತಂಡದ ಪರ ಆಡುತ್ತಿರುವ ಗೇಯ್ಲ್ ಕೇವಲ 54 ಎಸೆತಗಳಲ್ಲಿ 108 ರನ್ ಸಿಡಿಸಿದ್ದಾರೆ. ಇದು ಗೇಯ್ಲ್ ವೃತ್ತಿ ಜೀವನದ 18ನೇ ವಿಶ್ವದಾಖಲೆಯ ಟಿ20 ಶತಕವಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಟ್ರಿನ್ ಬಾಗೊ ನೈಟ್ ರೈಡರ್ಸ್ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತ್ತು. ಗೇಯ್ಲ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ಜಮೈಕಾ 18.2 ಓವರ್ ಗಳಲ್ಲಿ 3 ವಿಕೆಟ್ ಗೆ 192 ರನ್ ಗಳಿಸಿ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com