ಮುಂಬೈ ವಿಮಾನ ನಿಲ್ದಾಣದಲ್ಲಿ ಅನುಷ್ಕಾಗೆ ಮುತ್ತಿಟ್ಟು ಕಳುಹಿಸಿಕೊಟ್ಟ ವಿರಾಟ್ ಕೊಹ್ಲಿ!

ಹಲವು ದಿನಗಳಿಂದ ವೈಮನಸ್ಸಿನಿಂದ ದೂರಾಗಿದ್ದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಮುಂಬಯಿ ವಿಮಾನ ನಿಲ್ದಾಣದಲ್ಲಿ ಪರಸ್ಪರ ಕೈ ...
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ
Updated on: 

ನವದೆಹಲಿ: ಹಲವು ದಿನಗಳಿಂದ ವೈಮನಸ್ಸಿನಿಂದ ದೂರಾಗಿದ್ದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಮುಂಬಯಿ ವಿಮಾನ ನಿಲ್ದಾಣದಲ್ಲಿ ಪರಸ್ಪರ ಕೈ ಹಿಡಿದು ಸುತ್ತಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

ಇಷ್ಟು ದಿನ ಡ್ಯಾಶಿಂಗ್ ಕ್ರಿಕೆಟಿಗ ವಿರಾಟ್ ಐಪಿಎಲ್ ಪಂದ್ಯಗಳಲ್ಲಿ ಬ್ಯುಸಿ ಆಗಿದ್ದರು, ಸುಲ್ತಾನ್ ರಾಣಿ ಅನುಷ್ಕಾ ಶರ್ಮಾ ಅವರು ಸಲ್ಮಾನ್ ಖಾನ್ ಜತೆಗೆ ಚಿತ್ರೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇದರಿಂದಾಗಿ ಪರಸ್ಪರ ಭೇಟಿಯಾಗಲು ಸಾಧ್ಯವಾಗಿರಲಿಲ್ಲ.

ಸುಲ್ತಾನ್ ಚಿತ್ರದ ಶೂಟಿಂಗ್ ಗಾಗಿ  ಬುಡಾಪೆಸ್ಟ್​ಗೆ ಹೋಗಬೇಕಿದ್ದ ಅನುಷ್ಕಾಳನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ವಿರಾಟ್ ಡ್ರಾಪ್ ಮಾಡಿ ಮುತ್ತಿಕ್ಕಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, ಈ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com