ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ಆಯ್ಕೆ

ಟೀಂ ಇಂಡಿಯಾ ಪ್ರಧಾನ ಕೋಚ್ ಅನಿಲ್ ಕುಂಬ್ಳೆ ಆಯ್ಕೆ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಹಾಯಕ ಕೋಚ್ ಗಳನ್ನು ನೇಮಕ ಮಾಡಿದ್ದು, ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ಅಭಯ್ ಶರ್ಮಾರನ್ನು ನೇಮಕ ಮಾಡಲಾಗಿದೆ...
ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ (ಸಂಗ್ರಹ ಚಿತ್ರ)
ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ (ಸಂಗ್ರಹ ಚಿತ್ರ)

ನವದೆಹಲಿ: ಟೀಂ ಇಂಡಿಯಾ ಪ್ರಧಾನ ಕೋಚ್ ಅನಿಲ್ ಕುಂಬ್ಳೆ ಆಯ್ಕೆ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಹಾಯಕ ಕೋಚ್ ಗಳನ್ನು ನೇಮಕ ಮಾಡಿದ್ದು, ಬ್ಯಾಟಿಂಗ್ ಕೋಚ್  ಆಗಿ ಸಂಜಯ್ ಬಂಗಾರ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ಅಭಯ್ ಶರ್ಮಾರನ್ನು ನೇಮಕ ಮಾಡಲಾಗಿದೆ.

ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳಲಿರುವ ಟೀಂ ಇಂಡಿಯಾಕ್ಕೆ ಕೋಚ್ ಆಗಿರುವ ಅನಿಲ್ ಕುಂಬ್ಳೆ ಅವರು ತಮ್ಮ ಸಹಾಯಕ ಸಿಬ್ಬಂದಿಗಳನ್ನು ಆಯ್ಕೆ ಮಾಡಿಕೊಂಡಿದ್ದು, ಭಾರತ  ತಂಡ ಮಾಜಿ ಆಲ್ ರೌಂಡರ್ ಸಂಜಯ್ ಬಂಗಾರ್ ಅವರಿಗೆ ಬ್ಯಾಟಿಂಗ್ ವಿಭಾಗದ ಜವಾಬ್ದಾರಿ ನೀಡಲಾಗಿದ್ದು, ಅಭಯ್ ಶರ್ಮಾ ಅವರಿಗೆ ಫೀಲ್ಡಿಂಗ್ ವಿಭಾಗದ ಜವಾಬ್ದಾರಿ ಹೊರಿಸಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ನಲ್ಲಿ ಭಾರತ ಕ್ರಿಕೆಟ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು, ಈ ಪ್ರವಾಸಕ್ಕೆ ಅನಿಲ್ ಕುಂಬ್ಳೆ ಅವರು ಮುಖ್ಯ ಕೋಚ್ ಆಗಿದ್ದರೆ,  ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ಹಾಗೂ ಫೀಲ್ಡಿಂಗ್ ಕೋಚ್ ಆಗಿ ಅಭಯ್ ಶರ್ಮಾ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.

ಜಿಂಬಾಬ್ವೆಯಲ್ಲಿ ನಡೆದ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿ ಹಾಗೂ ಟಿ20 ಪಂದ್ಯಗಳ ಸರಣಿ ಗೆದ್ದ ಭಾರತ ತಂಡಕ್ಕೆ ಮಧ್ಯಂತರ ಕೋಚ್ ಆಗಿ ಸಂಜಯ್ ಬಂಗಾರ್  ಕಾರ್ಯನಿರ್ವಹಿಸಿದ್ದರು. ಅಭಯ್ ಶರ್ಮ ಅವರು ಫೀಲ್ಡಿಂಗ್ ಕೋಚ್ ಆಗಿದ್ದರು. ಅನಿಲ್ ಕುಂಬ್ಳೆ ಅವರ ಸಲಹೆ ಮೇರೆಗೆ ಸಂಜಯ್ ಹಾಗೂ ಅಭಯ್ ಅವರನ್ನು ಹಾಗೆಯೇ ಉಳಿಸಿಕೊಳ್ಳುವ  ನಿರ್ಧಾರಕ್ಕೆ ಬಿಸಿಸಿಐ ಬಂದಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಅಜಯ್ ಶಿರ್ಕೆ ಪ್ರಕಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com