Shahryar Khan
ಕ್ರಿಕೆಟ್
ಧರ್ಮಶಾಲಾದಲ್ಲಿ ಪಂದ್ಯ ಬೇಡ; ಬೇರೆಡೆಗೆ ಸ್ಥಳಾಂತರಿಸಿ: ಐಸಿಸಿಗೆ ಪಿಸಿಬಿ ಮನವಿ
ಐಸಿಸಿ ಟ್ವೆಂಟಿ 20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನನದ ನಡುವಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದ್ದು, ಅಲ್ಲಿ ಪಂದ್ಯಗಳನ್ನು...
ನವದೆಹಲಿ: ಐಸಿಸಿ ಟ್ವೆಂಟಿ 20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನನದ ನಡುವಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದ್ದು, ಅಲ್ಲಿ ಪಂದ್ಯಗಳನ್ನು ಆಯೋಜಿಸುವುದು ಬೇಡ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಶೆಹರ್ಯಾರ್ ಖಾನ್ ಐಸಿಸಿಗೆ ಒತ್ತಾಯಿಸಿದ್ದಾರೆ.
ಭಾರತ -ಪಾಕ್ ನಡುವಿನ ಪಂದ್ಯ ಧರ್ಮಶಾಲಾದಲ್ಲೇ ನಡೆಯುವುದಾಗಿ ಬಿಸಿಸಿಐ ಹೇಳಿತ್ತು. ಆದರೆ ಇತ್ತ ಪಿಸಿಬಿ, ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿ ಐಸಿಸಿಗೆ ಪತ್ರ ಬರೆದಿದೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.
ಟಿ 20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಧರ್ಮಶಾಲಾದಲ್ಲಿ ನಡೆಸಬಾರದು. ಇದರ ಬದಲು ಮೊಹಾಲಿ ಅಥವಾ ಕೊಲ್ಕತ್ತಾದಲ್ಲಿ ನಡೆಸಬೇಕು. ತಂಡದ ಭದ್ರತೆಯನ್ನು ಪರಿಗಣಿಸಿ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಖಾನ್ ಐಸಿಸಿಗೆ ಇಮೇಲ್ ಕಳಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ