ಐಸಿಸಿ ಮಹಿಳಾ ಟಿ20 ವಿಶ್ವಕಪ್: ಬಾಂಗ್ಲಾ ವಿರುದ್ಧ ಲಂಕಾ ಮಹಿಳೆಯರಿಗೆ ಜಯ

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾದ ಮಹಿಳಾ ಕ್ರಿಕೆಟ್ ತಂಡ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾದ ಮಹಿಳಾ ಕ್ರಿಕೆಟ್ ತಂಡ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದಾರೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಕೇವಲ 95 ರನ್ ಗಳಿಗೆ ಆಲ್ ಔಟ್ ಆಯಿತು. ಬಾಂಗ್ಲಾಪರ  ನಿಗರ್ ಸುಲ್ತಾನ ಗಳಿಸಿದ 33 ರನ್ ಗಳೇ ವೈಯುಕ್ತಿಕ ಗರಿಷ್ಠ ಮೊತ್ತವಾಗಿತ್ತು. ಅವರನ್ನು ಹೊರತು ಪಡಿಸಿದರೆ ಬಾಂಗ್ಲಾದೇ ಬೇರಾವ ಆಟಗಾರ್ತಿಯೂ ಗಟ್ಟಿಯಾಗಿ ಕ್ರೀಸ್ ನಲ್ಲಿ ನೆಲೆ ನಿಲ್ಲುವತ್ತ  ಗಮನ ಹರಿಸಲಿಲ್ಲ. ಅಂತಿಮವಾಗಿ ಬಾಂಗ್ಲಾದೇಶ ತಂಡ 19.5 ಓವರ್ ಗಳಲ್ಲಿ ಕೇವಲ 95 ರನ್ ಗಳಿಸಿ ಆಲ್ ಔಟ್ ಆಯಿತು.

ಈ ಅಲ್ಪ ಮೊತ್ತವನ್ನು ಬೆನ್ನು ಹತ್ತಿದ ಶ್ರೀಲಂಕಾ ವನಿತೆಯರು ಹೆಚ್ ಸಿರಿವರ್ಧನೆ (22 ರನ್ ) ಅವರ ಅಜೇಯ ಆಟದ ನೆರವಿನಿಂದ 18.1 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 97 ರನ್ ಗಳಿಸಿ ಬಾಂಗ್ಲಾ  ವಿರುದ್ಧ ಜಯ ದಾಖಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com