
ಕೊಲ್ಕತಾ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟಿ20 ವಿಶ್ವಕಪ್ ಪಂದ್ಯಾವಳಿಯ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾವನ್ನು ಪಾಕಿಸ್ತಾನ ತಂಡ ಮಣಿಸಿದೆ.
ಇದರೊಂದಿಗೆ ಮಾರ್ಚ್ 19 ರಂದು ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಟೀಂ ಇಂಡಿಯಾ ವಿರುದ್ಧದ ಪಂದ್ಯಕ್ಕೆ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತ್ತು. 158 ಗಳ ಮೊತ್ತವನ್ನು ಬೆನ್ನಟ್ಟಿದ ಶ್ರೀಲಂಕಾ ನಿಗದಿತ ಓವರ್ ನಲ್ಲಿ 9 ವಿಕೆಟ್ ಕಳೆದುಕೊಂಡು 142 ರನ್ ಗಳನ್ನು ಗಳಿಸಲಷ್ಟೇ ಸಾಧ್ಯವಾಯಿತು. ಹೀಗಾಗಿ ಪಾಕಿಸ್ತಾನ 15 ರನ್ ಗಳಿಂದ ಜಯದ ನಗೆ ಬೀರಿತು.
Advertisement