ಗೆಲುವಿನ ಸಂಭ್ರಮದಲ್ಲಿ ಕಿವೀಸ್ ಮಹಿಳಾ ಪಡೆ (ಚಿತ್ರಕೃಪೆ: ಕ್ರಿಕ್ ಇನ್ಫೋ)
ಕ್ರಿಕೆಟ್
ಐರ್ಲೆಂಡ್ ವಿರುದ್ಧ ಗೆದ್ದ ಕಿವೀಸ್ ಮಹಿಳೆಯರು
ಶುಕ್ರವಾರ ಐರ್ಲೆಂಡ್ ವನಿತೆಯರ ವಿರುದ್ಧ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವನಿತೆಯರ ತಂಡ 93 ರನ್ ಗಳ ಭರ್ಜರಿ ಜಯಗಳಿಸಿದೆ...
ಮೊಹಾಲಿ: ಶುಕ್ರವಾರ ಐರ್ಲೆಂಡ್ ವನಿತೆಯರ ವಿರುದ್ಧ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವನಿತೆಯರ ತಂಡ 93 ರನ್ ಗಳ ಭರ್ಜರಿ ಜಯ ದಾಖಲಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ, ಬೇಟ್ಸ್ ಮತ್ತು ಸೋಫಿಯಾ ಡಿವೈನ್(47) ಜೋಡಿಯ ಬಿರುಸಿನ ಬ್ಯಾಟಿಂಗ್‌ನಿಂದ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 177 ರನ್ ಗಳ ಬೃಹತ್ ಮೊತ್ತವನ್ನು ದಾಖಲಿಸಿತು. ಕಿವೀಸ್ ನೀಡಿದ 178 ರನ್ ಗಳ ಬೃಹತ್ ಮೊತ್ತವನ್ನು ಬೆನ್ನುಹತ್ತಿದ ಐರ್ಲೆಂಡ್ ವನಿತೆಯರು 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕೇವಲ 84 ರನ್ ಗಳನ್ನಷ್ಟೇ ಗಳಿಸಲು ಶಕ್ತವಾದರು. ಆ ಮೂಲಕ ಕಿವೀಸ್ ಎದುರು ಬರೊಬ್ಬರಿ 93 ರನ್ ಗಳ ಹೀನಾಯ ಸೋಲು ಅನುಭವಿಸಿದರು.
ಪ್ರಸಕ್ತ ಜಯದಿಂದ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡ ತನ್ನ ಉಪಾಂತ್ಯ ಪ್ರವೇಶ ಬಹುತೇಕ ಖಚಿತಪಡಿಸಿಕೊಂಡಿದೆ. ಉತ್ತಮ ಪ್ರದರ್ಶನ ನೀಡಿದ ಬೇಟ್ಸ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.


