ಟಿ20 ವಿಶ್ವಕಪ್: ಬಾಂಗ್ಲಾಗೆ 147 ರನ್ ಗಳ ಟಾರ್ಗೆಟ್ ನೀಡಿದ ಭಾರತ

ಟಿ20 ವಿಶ್ವಕಪ್: ಬಾಂಗ್ಲಾಗೆ 147 ರನ್ ಗಳ ಟಾರ್ಗೆಟ್ ನೀಡಿದ ಭಾರತ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಮೊದಲು...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 147 ರನ್ ಗಳ ಟಾರ್ಗೆಟ್ ನೀಡಿದೆ. 
ಟಾಸ್ ಗೆದ್ದು ಬಾಂಗ್ಲಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮೊದಲ ಬ್ಯಾಟ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ ನಿಗದಿತ ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 146ರನ್ ಗಳನ್ನು ಸೇರಿಸಿತು. 
ಆರಂಭದಲ್ಲಿ ರಕ್ಷಣಾತ್ಮಕ ಆಟವಾಡಿದ ರೋಹಿತ್ ಶರ್ಮಾ(18) ಹಾಗೂ ಶಿಖರ್ ಧವನ್ (23) ಬಾಂಗ್ಲಾ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಿದರು. ನಂತರ ಬಂದ ವಿರಾಟ್ ಕೋಹ್ಲಿ 24ರನ್, ಸುರೇಶ್ ರೈನಾ 30ರನ್, ಹಾರ್ದಿಕ್ ಪಾಂಡೆ 15ರನ್ ಹಾಗೂ ಯುವರಾಜ್ ಸಿಂಗ್ ಕೇವಲ 3ರನ್ ಗಳಿಸಿ ಔಟಾದರು.
ಭಾರತದ ಪಾಲಿಗೆ ಈ ಪಂದ್ಯ ಮಹತ್ವದಾಗಿದ್ದು, ಟೀಂ ಇಂಡಿಯಾ ಉತ್ತಮ ಬೌಲಿಂಗ್ ಪ್ರದರ್ಶನ ಮಾಡುವ ಮೂಲಕ ಬಾಂಗ್ಲಾದೇಶವನ್ನು ಸಮರ್ಥವಾಗಿ ಎದುರಿಸಿ ಜಯ ಸಾಧಿಸಿದಲ್ಲಿ ಸೆಮಿಫೈನಲ್ ಪ್ರವೇಶಕ್ಕೆ ಹಾದಿ ಸುಗಮವಾಗಲಿದೆ.
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸಿದ ವಿಶ್ವಾಸದಲ್ಲಿರುವ ಭಾರತ ತಂಡ ಟಿ20 ವಿಶ್ವಕಪ್​ನ ತನ್ನ ಮೂರನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸುತ್ತಿದೆ.
ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬಳಿಕ ಒತ್ತಡ ಅನುಭವಿಸಿದ್ದ ಟೀಂ ಇಂಡಿಯಾ. ಪಾಕಿಸ್ತಾನ ವಿರುದ್ಧ ಈಡನ್ ಗಾರ್ಡನ್ಸ್ ನಲ್ಲಿ ನಡೆದ ಹೈ ವೋಲ್ಟೆಜ್ ಪಂದ್ಯದಲ್ಲಿ ಮಣಿಸಿ ವಿಶ್ವಕಪ್ ಅಭಿಯಾನ ಜೀವಂತವಾಗಿಸಿಕೊಂಡಿತ್ತು. ಇಂದಿನ ಪಂದ್ಯದಲ್ಲಿ ರನ್​ರೇಟ್​ ಅನ್ನು ಹೆಚ್ಚಳ ಮಾಡಿಕೊಳ್ಳುವುದರೊಂದಿಗೆ ಭರ್ಜರಿ ಜಯ ದಾಖಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಭದ್ರ ಪಡಿಸಿಕೊಳ್ಳಬೇಕಿದೆ. 

Related Stories

No stories found.

Advertisement

X
Kannada Prabha
www.kannadaprabha.com