ಬೆಂಗಳೂರಿನಲ್ಲಿ ಬಾಂಗ್ಲಾ ವಿರುದ್ಧ ಟೀಂ ಇಂಡಿಯಾ ಹಣಾಹಣಿ

ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸಿದ ವಿಶ್ವಾಸದಲ್ಲಿರುವ ಭಾರತ ತಂಡ ಟಿ20 ವಿಶ್ವಕಪ್​ನ ತನ್ನ ಮೂರನೇ..
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 

ಬೆಂಗಳೂರು: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸಿದ ವಿಶ್ವಾಸದಲ್ಲಿರುವ ಭಾರತ ತಂಡ ಟಿ20 ವಿಶ್ವಕಪ್​ನ ತನ್ನ ಮೂರನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲಿದ್ದು, ಇಂದಿನ ಪಂದ್ಯದಲ್ಲಿ ಭಾರತ ಜಯ ಸಾಧಿಸಿದಲ್ಲಿ ಸೆಮಿಫೈನಲ್ ಪ್ರವೇಶಕ್ಕೆ ಹಾದಿ ಸುಗಮವಾಗಲಿದೆ.

ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬಳಿಕ ಒತ್ತಡ ಅನುಭವಿಸಿದ್ದ ಟೀಂ ಇಂಡಿಯಾ. ಪಾಕಿಸ್ತಾನ ವಿರುದ್ಧ ಈಡನ್ ಗಾರ್ಡನ್ಸ್ ನಲ್ಲಿ ನಡೆದ ಹೈ ವೋಲ್ಟೆಜ್ ಪಂದ್ಯದಲ್ಲಿ ಮಣಿಸಿ ವಿಶ್ವಕಪ್ ಅಭಿಯಾನ ಜೀವಂತವಾಗಿಸಿಕೊಂಡಿತ್ತು. ಇಂದಿನ ಪಂದ್ಯದಲ್ಲಿ ರನ್​ರೇಟ್​ ಅನ್ನು ಹೆಚ್ಚಳ ಮಾಡಿಕೊಳ್ಳುವುದರೊಂದಿಗೆ ಭರ್ಜರಿ ಜಯ ದಾಖಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಭದ್ರ ಪಡಿಸಿಕೊಳ್ಳಬೇಕಿದೆ.

ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಭಾರತ ತಂಡ, ಎರಡೂ ಪಂದ್ಯದಲ್ಲೂ ತನ್ನ ಖ್ಯಾತಿಗೆ ತಕ್ಕ ನಿರ್ವಹಣೆ ನೀಡಿಲ್ಲ. ಕಿವೀಸ್ ವಿರುದ್ಧ ಎಲ್ಲ ಬ್ಯಾಟ್ಸ್​ಮನ್​ಗಳು ನೀರಸ ಆಟವಾಡಿದ್ದರೆ, ಪಾಕಿಸ್ತಾನ ವಿರುದ್ಧ ಕೊಹ್ಲಿ ಹಾಗೂ ಯುವರಾಜ್ ಮಾತ್ರ ಮಿಂಚಿದ್ದರು. ಶಿಖರ್ ಧವನ್, ರೋಹಿತ್ ಶರ್ಮ ಹಾಗೂ ಸುರೇಶ್ ರೈನಾ ರನ್ ಗಳಿಸಲು ಪರದಾಡುತ್ತಿರುವುದು ತಂಡಕ್ಕೆ ಸಮಸ್ಯೆಯಾಗಿದೆ. ಕೊಹ್ಲಿ ಎಂದಿನಂತೆ ರನ್ ಗಳಿಸುತ್ತಿರುವುದು ನಾಯಕನ ಆತಂಕವನ್ನು ದೂರ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com