ಐಸಿಸಿಗೂ ಬೆರಗು ಹುಟ್ಟಿಸಿದ ಇಂಡೋ-ಬಾಂಗ್ಲಾ ಫಲಿತಾಂಶ
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ-ಐಸಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ನ ಅಧಿಪತಿ. ಕ್ರಿಕೆಟ್ ನ ಜನಪ್ರಿಯತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಸಂಸ್ಥೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಆದರೆ ಇಂತಹ ಐಸಿಸಿ ಕೂಡ ಭಾರತ-ಬಾಂಗ್ಲಾದೇಶ ನಡುವಿನ ಪಂದ್ಯವನ್ನು ಬೆರಗುಗಣ್ಣಿನಿಂದ ನೋಡಿತ್ತು...

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ-ಐಸಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ನ ಅಧಿಪತಿ. ಕ್ರಿಕೆಟ್ ನ ಜನಪ್ರಿಯತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಸಂಸ್ಥೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಆದರೆ ಇಂತಹ ಐಸಿಸಿ ಕೂಡ ಭಾರತ-ಬಾಂಗ್ಲಾದೇಶ ನಡುವಿನ ಪಂದ್ಯವನ್ನು ಬೆರಗುಗಣ್ಣಿನಿಂದ ನೋಡಿತ್ತು.
ಪಂದ್ಯದ ಬಳಿಕ ಸರಣಿ ಟ್ವೀಟ್ ಗಳನ್ನು ಮಾಡಿರುವ ಐಸಿಸಿ, ಭಾರತ-ಬಾಂಗ್ಲಾದೇಶ ನಡುವಿನ ಪಂದ್ಯದ ರೋಚಕತೆಯನ್ನು ಹಂಚಿಕೊಂಡಿದೆ. ಸಾಕಷ್ಟು ರೋಚಕ ಪಂದ್ಯಗಳಿಗೆ ಐಸಿಸಿ ಸಾಕ್ಷಿಯಾಗಿದ್ದು, ಐಸಿಸಿಗೆ ಬೆರಗು ಹುಟ್ಟಿಸಿದ್ದ ಭಾರತ-ಬಾಂಗ್ಲಾದೇಶ ನಡುವಿನ ಕೊನೆಯ ಎಸೆತದ ವಿಡಿಯೋವನ್ನು ಐಸಿಸಿ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಅಷ್ಟೇ ಅಲ್ಲದೆ ಗ್ಯಾಲರಿಯಲ್ಲಿ ಪ್ರೇಕ್ಷಕರು ಫಲಿತಾಂಶ ಏನಾಯ್ತು ಎಂದು ತುದಿಗಾಲ್ಲಲ್ಲಿ ನಿಂತಿದ್ದರೆ, ಭಾರತೀಯ ಅಭಿಮಾನಿಗಳು ಭಾರತ ತಂಡ ಗೆಲುವು ಸಾಧಿಸಿತೇ ಅಥವಾ ಸೋತಿತೇ ಎಂಬ ಗೊಂದಲದ ಭಾವನೆಯೊಂದಿಗೆ ಏನೂ ತೋಚದೇ ಕುತೂಹಲದಿಂದ ಮೂರನೇ ಅಂಪೈರ್ ನಿರ್ಧಾರಕ್ಕೆ ಕಾಯುತ್ತಿದ್ದ ದೃಶ್ಯಾವಳಿಗಳನ್ನು ಐಸಿಸಿ ಟ್ವೀಟ್ ಮಾಡಿದೆ.
ಐಸಿಸಿ ಟ್ವಿಟರ್ ನಲ್ಲಿ ಹಂಚಿಕೊಂಡ ಕೆಲ ಟ್ವೀಟ್ ಗಳು ಇಲ್ಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


