ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಪಂದ್ಯ: ಪೂಜೆ, ಪ್ರಾರ್ಥನೆಗಳಲ್ಲ, ಕಠಿಣ ಶ್ರಮದಿಂದ ಗೆಲುವು ಸಾಧ್ಯ ಎಂದ ಕೊಹ್ಲಿ

ಮಾ.27 ಭಾರತ- ಆಸ್ಟ್ರೇಲಿಯಾ ನಡುವೆ ಮತ್ತೊಂದು ಹೈ ವೋಲ್ಟೇಜ್ ಪಂದ್ಯ..

ಆಸ್ಟ್ರೇಲಿಯಾ ವಿರುದ್ಧದ ಪಂದ್ಯ: ಪೂಜೆ, ಪ್ರಾರ್ಥನೆಗಳಲ್ಲ, ಕಠಿಣ ಶ್ರಮದಿಂದ ಗೆಲುವು ಸಾಧ್ಯ ಎಂದ ಕೊಹ್ಲಿ
ವಿರಾಟ್ ಕೊಹ್ಲಿ
Published On :

ಮಾ.27 ರಂದು ಭಾರತ- ಆಸ್ಟ್ರೇಲಿಯಾ ನಡುವೆ ಮೊಹಾಲಿಯಲ್ಲಿ ಮತ್ತೊಂದು ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿರುವ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ, ಪೂಜೆ, ಪ್ರಾರ್ಥನೆಗಳಿಗಿಂತ ಕಠಿಣ ಶ್ರಮದ ಮೂಲಕ ಗೆಲುವು ಸಾಧ್ಯ ಎಂದು ತಿಳಿಸಿದ್ದಾರೆ.

ನಾನೇನು ಪೂಜೆ, ಪ್ರಾರ್ಥನೆಗಳನ್ನು ಮಾಡುವವನಂತೆ ಕಾಣುತ್ತೇನಾ? ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಕೊಹ್ಲಿ, ಕಠಿಣ ಶ್ರಮ ಹಾಗೂ ಆತ್ಮವಿಶ್ವಾಸ ಯಶಸ್ಸು ತಂದುಕೊಡುತ್ತದೆ ಎಂಬುದನ್ನು ನಂಬಿರುವುದಾಗಿ ತಿಳಿಸಿದ್ದಾರೆ.  
ಭಾರತ ತಂಡಕ್ಕೆ ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಉಪಾಂತ್ಯಕ್ಕೆ ಅರ್ಹತೆ ಪಡೆಯಲು ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದ್ದು  ಈ ಪಂದ್ಯ ಭಾರತಕ್ಕೆ ಮಹತ್ವದ್ದಾಗಿದೆ. ಉಭಯ ತಂಡದ ಆಟಗಾರರು ಶನಿವಾರವೇ ಕಾರ್ಯತಂತ್ರ ರೂಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.