ಆಸ್ಟ್ರೇಲಿಯಾ ಪ್ರವಾಸದ ವೇಳೆ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದ ಪಾಂಡೆ, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪ್ರಮುಖ ಆಕಾಂಕ್ಷಿಯಾಗಿದ್ದರು. ಐಪಿಎಲ್‌ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಶ್ರೆಯಕ್ಕೂ ಈ ಹಿಂದೆ ಪಾಂಡೆ ಪಾತ್ರರಾಗಿದ್ದಾರೆ.