
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಏಕದಿನ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ಕುಸಿತ ಕಂಡಿದೆ. ಏಕದಿನ ರ‍್ಯಾಂಕಿಂಗ್‌ನಲ್ಲಿ ಭಾರತ ತಂಡ 3ರಿಂದ 4ನೇ ಸ್ಥಾನಕ್ಕೆ ಕುಸಿದಿದೆ.
ಏಕದಿನ ರ‍್ಯಾಂಕಿಂಗ್‌ನಲ್ಲಿ 4 ಅಂಕ ಕಳೆದುಕೊಂಡಿದ್ದರಿಂದ ಟೀಂ ಇಂಡಿಯಾ (109) ನಾಲ್ಕನೇ ಸ್ಥಾನಕ್ಕೆ ಜಾರಿದೆ. ಇನ್ನು 112 ಅಂಕಗಳಿಂದ ದಕ್ಷಿಣ ಆಫ್ರಿಕಾ ಮೂರನೇ ಸ್ಥಾನದಲ್ಲಿದೆ.
ಇನ್ನು ಎಂದಿನಂತೆ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ಅಗ್ರಸ್ಥಾನ ಕಾಯ್ದುಕೊಂಡರೆ, ನ್ಯೂಜಿಲೆಂಡ್ 2ನೇ ಸ್ಥಾನದಲ್ಲಿದೆ. ಶ್ರೀಲಂಕಾ(104), ಇಂಗ್ಲೆಂಡ್(103) ಮತ್ತು ಬಾಂಗ್ಲಾದೇಶ(98) ಕ್ರಮವಾಗಿ 5, 6, 7ನೇ ಸ್ಥಾನದಲ್ಲಿವೆ.
ಟಿ20 ರ್ಯಾಂಕಿಂಗ್ ನಲ್ಲೂ ಕುಸಿತ: ಕಳೆದ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋತು ಟೂರ್ನಿಯಿಂದ ಹೊರಬಂದಿದ್ದ ಟೀಂ ಇಂಡಿಯಾ (132ಅಂಕ) ಅಗ್ರಸ್ಥಾನದಿಂದ 2ನೇ ಸ್ಥಾನಕ್ಕಿಳಿದಿದ್ದು, ಅಷ್ಟೇ ಅಂಕ ಗಳಿಸಿರುವ ನ್ಯೂಜಿಲೆಂಡ್ ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಿದೆ.
ಟಿ20 ವಿಶ್ವಕಪ್ ಚಾಂಪಿಯನ್ ವೆಸ್ಟ್‌ಇಂಡೀಸ್(122) 3ನೇ ಸ್ಥಾನದಲ್ಲಿದೆ. ಇನ್ನುಳಿದಂತೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಮವಾಗಿ 4, 5 ಮತ್ತು 6ನೇ ಸ್ಥಾನದಲ್ಲಿವೆ.
Advertisement