ಐಸಿಸಿಗೆ ಶಶಾಂಕ್ ಮನೋಹರ್ 'ಬಿಗ್‍ಬಾಸ್'

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ಅಧ್ಯಕ್ಷ ಶಶಾಂಕ್ ಮನೋಹರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಧ್ಯಕ್ಷರಾಗಿ...
ಶಶಾಂಕ್ ಮನೋಹರ್
ಶಶಾಂಕ್ ಮನೋಹರ್

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ಅಧ್ಯಕ್ಷ ಶಶಾಂಕ್ ಮನೋಹರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಶಾಂಕ್ ಮನೋಹರ್ ಯಾವುದೇ ವಿರೋಧವಿಲ್ಲದೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಐಸಿಸಿ ಅಧ್ಯಕ್ಷರಾಗಿರುವವರು 2 ಸ್ಥಾನಗಳಲ್ಲಿ ಮುಂದುವರೆಯಬಾರದು ಎಂದು ಐಸಿಸಿ ಕಾರ್ಯನಿರ್ವಾಹಕ ಮಂಡಳಿ ನಿರ್ಣಯ ತೆಗೆದುಕೊಂಡ ಹಿನ್ನೆಲೆಯಲ್ಲಿ ಶಶಾಂಕ್ ಮನೋಹರ್ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಕಳೆದ ಎರಡು ದಿನಗಳ ಹಿಂದೆ ರಾಜೀನಾಮೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com