ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯ ಫೈನಲ್ ಪಂದ್ಯ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದ್ದು, ವಿಜೇತ ತಂಡಕ್ಕೆ 20 ಕೋಟಿ ಹಾಗೂ ರನ್ನರ್ ಅಪ್ ತಂಡಕ್ಕೆ 11 ಕೋಟಿ ಬಹುಮಾನ ಮೊತ್ತ ಸಿಗಲಿದೆ.
ಅಗ್ರ ಎರಡು ತಂಡಗಳ ಜತೆಗೆ ಪ್ಲೇ ಆಫ್ ಗೆ ಎಂಟ್ರಿ ನೀಡಿದ್ದ ಇನ್ನೆರಡು ತಂಡಗಳಾದ ಗುಜರಾತ್ ಲಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಗೆ ತಲಾ 7.5 ಕೋಟಿ ರುಪಾಯಿ ಬಹುಮಾನ ಮೊತ್ತ ಪಡೆಯಲಿವೆ.
ಬಿಸಿಸಿಐ ಮತ್ತು ಐಪಿಎಲ್ ನ ನಿಯಮದಂತೆ ವಿಜೇತ ತಂಡಕ್ಕೆ ಲಭಿಸಿದ ನಗದು ಬಹುಮಾನದಲ್ಲಿ ಅರ್ಧದಷ್ಟು ಮೊತ್ತವನ್ನು ಆಟಗಾರರು ಹಂಚಿಕೊಳ್ಳಲಿದ್ದಾರೆ.
Advertisement