

ಮುಂಬೈ: ಬಲತೊಡೆ ಗಾಯದಿಂದ ಬಳಲುತ್ತಿರುವ ರೋಹಿತ್ ಶರ್ಮಾ ಇದೀಗ ಶಸ್ತ್ರ ಚಿಕಿತ್ಸೆಗೆ ಒಳಪಡಬೇಕಿದೆ.
ಬಲ ತೊಡೆಯ ಗಾಯದಿಂದ ಬಳಲುತ್ತಿರುವ ರೋಹಿತ್ ಶರ್ಮಾ ಮುಂದಿನ ವಾರ ಲಂಡನ್ ಗೆ ಪ್ರಯಾಣ ಬೆಳೆಸಲಿದ್ದು ಸ್ಪೆಷಲಿಸ್ಟ್ ವೈದ್ಯರನ್ನು ಭೇಟಿಯಾಗಲಿದ್ದಾರೆ. ಅಗತ್ಯ ಬಿದ್ದರೆ ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಳ್ಳಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಿಳಿಸಿದೆ.
ಇದರಿಂದಾಗಿ ಮುಂದಿನ ವರ್ಷದ ಆರಂಭದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಅಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.
ವಿಶಾಖಪಟ್ಟಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾರ ಬಲತೊಡೆಗೆ ಗಾಯವಾಗಿತ್ತು.