1ನೇ ಟೆಸ್ಟ್: 488ಕ್ಕೆ ಟೀಂ ಇಂಡಿಯಾ ಆಲೌಟ್, ಇಂಗ್ಲೆಂಡ್ 49 ರನ್ ಮುನ್ನಡೆ

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 488 ರನ್ ಗಳಿಗೆ ಆಲೌಟ್ ಆಗಿದ್ದು ಇಂಗ್ಲೆಂಡ್ 49 ರನ್ ಗಳ ಮುನ್ನಡೆ...
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 

ರಾಜ್ಕೋಟ್: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 488 ರನ್ ಗಳಿಗೆ ಆಲೌಟ್ ಆಗಿದ್ದು ಇಂಗ್ಲೆಂಡ್ 49 ರನ್ ಗಳ ಮುನ್ನಡೆ ಪಡೆದಿದೆ.

ರಾಜ್ ಕೋಟ್ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 488 ರನ್ ಗಳಿಗೆ ಆಲೌಟ್ ಆಗಿದೆ. ಇನ್ನು ಇನ್ನಿಂಗ್ಸ್ ಪ್ರಾರಂಭಿಸಿದ್ದ ಇಂಗ್ಲೆಂಡ್ 537 ರನ್ ಗಳಿಗೆ ಆಲೌಟ್ ಆಗಿತ್ತು. ಇದೀಗ ಭಾರತವನ್ನು 488 ರನ್ ಗಳಿಗೆ ಆಲೌಟ್ ಮಾಡಿದ್ದು 49 ರನ್ ಗಳ ಮುನ್ನಡೆ ಪಡೆದಿದೆ.

ಭಾರತ ಸರ್ವಪತನದ ಬಳಿಕ ದ್ವಿತೀಯ ಇನ್ನಿಂಗ್ಸ್ ಪ್ರಾರಂಭಿಸಿರುವ ಇಂಗ್ಲೆಂಡ್ 9 ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 39 ರನ್ ಗಳಿಸಿದೆ. ಇದರೊಂದಿಗೆ 88 ರನ್ ಗಳ ಮುನ್ನಡೆ ಪಡೆದಿದೆ.

ಹಸೀಬ್ ಹಮೀದ್ ಅಜೇಯ 26 ಹಾಗೂ ಅಲ್ಸ್ಟೈರ್ ಕುಕ್ 13 ರನ್ ಗಳಿಸಿ ಆಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com