ಕನ್ನಡಿಗ ರಾಹುಲ್‌ಗೆ ಬುಲಾವ್ ನೀಡಿದ ಕೋಚ್ ಅನಿಲ್ ಕುಂಬ್ಳೆ

ಉತ್ತಮ ಫಾರ್ಮ್ ನಲ್ಲಿದ್ದ ಕನ್ನಡಿಗ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದರು. ಇದೀಗ ರಣಜಿ ಟೂರ್ನಿಯಲ್ಲಿ ರಾಜಸ್ಥಾನ...
ಕೆಎಲ್ ರಾಹುಲ್
ಕೆಎಲ್ ರಾಹುಲ್
Updated on: 
ನವದೆಹಲಿ: ಉತ್ತಮ ಫಾರ್ಮ್ ನಲ್ಲಿದ್ದ ಕನ್ನಡಿಗ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದರು. ಇದೀಗ ರಣಜಿ ಟೂರ್ನಿಯಲ್ಲಿ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿರುವುದರಿಂದ ಮತ್ತೆ ಅವರು ಇಂಗ್ಲೆಂಡ್ ವಿರುದ್ಧದ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. 
ನವೆಂಬರ್ 17ರಿಂದ ವಿಶಾಖಪಟ್ಟಂನಲ್ಲಿ ದ್ವಿತೀಯ ಟೆಸ್ಟ್ ಆರಂಭಗೊಳ್ಳಲಿದ್ದು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಕಾನ್ಪುರ ಟೆಸ್ಟ್ ಪಂದ್ಯದ ವೇಳೆ ಮಂಡಿ ನೋವಿಗೆ ಸಿಲುಕ್ಕಿದ್ದ ರಾಹುಲ್ ಭಾರತ ತಂಡದಿಂದ ಹೊರಬಿದ್ದಿದ್ದರು. ಇದೇ ಕಾರಣಕ್ಕೆ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಸ್ಥಾನ ಸಂಪಾದಿಸಲು ಸಾಧ್ಯವಾಗಿರಲಿಲ್ಲ. 
ಪ್ರಸ್ತುತ ರಣಜಿ ಟೂರ್ನಿಯಲ್ಲಿ ಕರ್ನಾಟಕದ ಪರ ಆಡುತ್ತಿರುವ ರಾಹುಲ್ ಉತ್ತಮ ಬ್ಯಾಟಿಂಗ್ ಫಾರ್ಮ್ ಪ್ರದರ್ಶಿಸಿದ್ದಾರೆ. ರಾಜಸ್ಥಾನ ವಿರುದ್ದ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಕ್ರಮವಾಗಿ 76 ರನ್ ಹಾಗೂ 106 ಬಾರಿಸಿದ್ದು ಟೀಂ ಇಂಡಿಯಾ ತಂಡ ಸೇರಲು ಕಾರಣವಾಗಿದೆ. ಕೆಎಲ್ ರಾಹುಲ್ ಆಗಮನದಿಂದಾಗಿ ಇಂಗ್ಲೆಂಡ್ ವಿರುದ್ಧ ರಾಜ್ ಕೋಟ್ ಟೆಸ್ಟ್ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ ಗೌತಮ್ ಗಂಭೀರ್ ಸ್ಥಾನಕ್ಕೆ ಕುತ್ತು ಎದುರಾಗಲಿದೆ. 
ರಣಜಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ. ಜತೆಗೆ ಶಿಷ್ಟಾಚಾರದಂತೆ ಚೇತರಿಕೆ ಬಳಿಕ ರಣಜಿ ಪಂದ್ಯದಲ್ಲಿ ಆಡಿ ದೈಹಿಕ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಹೀಗಾಗಿ ಆಡುವ 11 ಆಟಗಾರರ ಪಟ್ಟಿಯಲ್ಲಿ ರಾಹುಲ್ ಹೆಸರು ಸೇರ್ಪಡೆ ನಮ್ಮ ಉದ್ದೇಶವಾಗಿತ್ತು ಎಂದು ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com