2ನೇ ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಪೂಜಾರ, ಕೊಹ್ಲಿ ಭರ್ಜರಿ ಆಟ

ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತದ ಹೊರತಾಗಿಯೂ ಭಾರತ ಭರ್ಜರಿ ಬ್ಯಾಟಿಂಗ್ ನಡೆಸಿದೆ.
ಶತಕ ಸಂಭ್ರಮದಲ್ಲಿ ಕೊಹ್ಲಿ ಹಾಗೂ ಪೂಜಾರಾ (ಕ್ರಿಕ್ ಇನ್ಫೋ ಚಿತ್ರ)
ಶತಕ ಸಂಭ್ರಮದಲ್ಲಿ ಕೊಹ್ಲಿ ಹಾಗೂ ಪೂಜಾರಾ (ಕ್ರಿಕ್ ಇನ್ಫೋ ಚಿತ್ರ)

ವಿಶಾಖಪಟ್ಟಣ: ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತದ ಹೊರತಾಗಿಯೂ ಭಾರತ ಭರ್ಜರಿ ಬ್ಯಾಟಿಂಗ್ ನಡೆಸಿದೆ.

ಆರಂಭಿಕರಾಗಿ ಕಣಕ್ಕಿಳಿದ ಮುರಳಿ ವಿಜಯ್ ಹಾಗೂ ಕೆಎಲ್ ರಾಹುಲ್ ಜೋಡಿ ಬಹುಬೇಗನೇ ಬೇರ್ಪಟ್ಟಿತು. ತಂಡದ ಮೊತ್ತ ಕೇವಲ 6 ರನ್ ಗಳಾಗಿದ್ದಾಗ ಬ್ರಾಡ್ ಎಸೆದ ಎರಡನೇ ಓವರ್ ನಲ್ಲಿಯೇ ರಾಹುಲ್ ಸ್ಟೋಕ್ಸ್ ಗೆ ಕ್ಯಾಚಿತ್ತು  ಹೊರನಡೆದರು. ಬಳಿಕ ಮುರಳಿ ವಿಜಯ್ ಕೂಡ 20 ರನ್ ಗಳಿಸಿ ಆ್ಯಂಡರ್ಸನ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಗೂಡಿದ ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ ಪೂಜಾರ ಜೋಡಿ ಉತ್ತಮ ಆಟವಾಡುತ್ತಿದ್ದು,  ಇಬ್ಬರೂ ಕೂಡ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಆ ಮೂಲಕ ಮೊದಲ ಇನ್ನಿಂಗ್ಸ್ ನಲ್ಲಿ ಬೃಹತ್ ರನ್ ಕಲೆಹಾಕುವ ಮುನ್ಸೂಚನೆ ನೀಡಿದ್ದಾರೆ.

ಇತ್ತೀಚಿನ ವರದಿಗಳು ಬಂದಾಗ ಭಾರತ 2 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿತ್ತು. ಕ್ರೀಸ್ ನಲ್ಲಿರುವ ವಿರಾಟ್ ಕೊಹ್ಲಿ 103 ರನ್ ಗಳಿಸಿದ್ದರೆ, ಚೇತೇಶ್ವರ ಪೂಜಾರ 110ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇನ್ನು ಇಂಗ್ಲೆಂಡ್ ಪರ ಆ್ಯಂಡರ್ಸನ್ ಹಾಗೂ ಬ್ರಾಡ್ ತಲಾ 1 ವಿಕೆಟ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com