ವಿರಾಟ್ ಕೊಹ್ಲಿ ವಿರುದ್ಧದ ಚೆಂಡು ವಿರೂಪಗೊಳಿಸಿದ ಆರೋಪವನ್ನು ತಳ್ಳಿಹಾಕಿದ ಕುಂಬ್ಳೆ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧದ ಚೆಂಡು ವಿರೂಪಗೊಳಿಸಿದ ಆರೋಪವನ್ನು ತಂಡದ ಕೋಚ್ ಅನಿಲ್ ಕುಂಬ್ಳೆ ತಳ್ಳಿಹಾಕಿದ್ದಾರೆ...
ಅನಿಲ್ ಕುಂಬ್ಳೆ-ವಿರಾಟ್ ಕೊಹ್ಲಿ
ಅನಿಲ್ ಕುಂಬ್ಳೆ-ವಿರಾಟ್ ಕೊಹ್ಲಿ

ಮೊಹಾಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧದ ಚೆಂಡು ವಿರೂಪಗೊಳಿಸಿದ ಆರೋಪವನ್ನು ತಂಡದ ಕೋಚ್ ಅನಿಲ್ ಕುಂಬ್ಳೆ ತಳ್ಳಿಹಾಕಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆದ್ದಿದ್ದು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೆಂಡನ್ನೂ ವಿರೂಪಗೊಳಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು, ಇದಕ್ಕೆ ಪ್ರತಿಕ್ರಿಯಿಸಿರುವ ಅನಿಲ್ ಕುಂಬ್ಳೆ ಅಂಪೈರ್, ರೆಫ್ರಿಗಾಗಲಿ ಕಾಣಿಸದ ದೋಷ ಮಾಧ್ಯಮದವರಿಗೆ ಕಾಣಿಸಿದೆ. ಮಾಧ್ಯಮಗಳಲ್ಲಿ ಬಂದ ಸುದ್ದಿಗೆಲ್ಲಾ ನಾನು ಪ್ರತಿಕ್ರಿಯಿಸಲಾರೆ. ಕೊಹ್ಲಿ ಮೇಲಿನ ಆರೋಪಗಳೆಲ್ಲ ಸತ್ಯಕ್ಕೆ ದೂರವಾಗಿವೆ ಎಂದು ಹೇಳಿದ್ದಾರೆ.

ಕೊಹ್ಲಿ ಅವರು ಎಂಜಲು ಹಚ್ಚುವ ಜತೆಗೆ ಚ್ಯೂಯಿಂಗ್ ಗಮ್ ಸಿಹಿಯನ್ನು ಚೆಂಡಿಗೆ ಉಜ್ಜಿದ್ದಾರೆ ಎಂದು ಆರೋಪಿಸಿ ಬ್ರಿಟನ್ನಿನ ಟ್ಯಾಬ್ಲ್ಯಾಡ್ ಪತ್ರಿಕೆಯೊಂದು ವಿಡಿಯೋ ದೃಶ್ಯಾವಳಿಯನ್ನು ಪ್ರಸಾರ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com