3ನೇ ಟಸ್ಟ್: ಮೊಹಾಲಿಯಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಬಿಗಿ ಹಿಡಿತ

ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ನಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸುವ ಸನ್ನಾಹದಲ್ಲಿದ್ದು, ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಬ್ಯಾಟ್ಸಮನ್ ಗಳನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿದೆ.
ವಿಕೆಟ್ ಪಡೆದ ಸಂಭ್ರಮದಲ್ಲಿ ಜಡೇಜಾ (ಕ್ರಿಕ್ ಇನ್ಫೋ ಚಿತ್ರ)
ವಿಕೆಟ್ ಪಡೆದ ಸಂಭ್ರಮದಲ್ಲಿ ಜಡೇಜಾ (ಕ್ರಿಕ್ ಇನ್ಫೋ ಚಿತ್ರ)

ಮೊಹಾಲಿ: ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ನಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸುವ ಸನ್ನಾಹದಲ್ಲಿದ್ದು, ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಬ್ಯಾಟ್ಸಮನ್ ಗಳನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿದೆ.

ಪ್ರಮುಖವಾಗಿ ಆರ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಯಾದವ್ ಅವರ ಮಾರಕ ಬೌಲಿಂಗ್ ತರಗೆಲೆಗಳಂತೆ ಇಂಗ್ಲೆಂಡ್ ಬ್ಯಾಟ್ಸಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದ್ದು, ಇಂಗ್ಲೆಂಡ್ ತಂಡ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ  ಕೇವಲ 156 ರನ್ ಗಳಿಗೆ ಪ್ರಮುಖ 7 ವಿಕೆಟ್ ಗಳನ್ನು ಕಳೆದುಕೊಂಡಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಕೊಹ್ಲಿ ಪಡೆ ನೀಡಿದ್ದ 134 ರನ್ ಗಳ ಮುನ್ನಡೆಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡಕ್ಕೆ ನಿನ್ನೆ ಅಶ್ವಿನ್ ಆಘಾತ ನೀಡಿದ್ದರು. ನಿನ್ನೆ 4  ವಿಕೆಟ್ ನಷ್ಟಕ್ಕೆ 78 ರನ್ ಗಳಿಸಿದ್ದ ಇಂಗ್ಲೆಂಡ್ ತಂಡ ಇಂದು ಕೇವಲ 78 ರನ್ ಗಳನ್ನು ಸೇರಿಸುವಷ್ಟರಲ್ಲಿಯೇ ಮತ್ತೆ ಮೂರು ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡಿತು.

ನಿನ್ನೆ 34 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದ ಜೋ ರೂಟ್ ಇಂದು ಅರ್ಧ ಶತಕ ಸಿಡಿಸಿದರು. ಆದರೆ ರೂಟ್ ಗೆ ಇಂಗ್ಲೆಂಡ್ ತಂಡ ಇತರೆ ಆಟಗಾರರಿಂದ ಉತ್ತಮ ಸಾಥ್ ದೊರೆಯಲ್ಲಿಲ್ಲ. ನಿನ್ನೆ ರೂಟ್ ರೊಂದಿಗೆ ಕ್ರೀಸ್  ಕಾಯ್ದುಕೊಂಡಿದ್ದ ಬ್ಯಾಟ್ಟಿ ಶೂನ್ಯಕ್ಕೆ ನಿರ್ಗಮಿಸಿದರೆ, ಬಟ್ಲರ್ 18ರನ್ ಗಳಿಗೇ ಯಾದವ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು. ಬಳಿಕ 78 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರೂಟ್ ಕೂಡ ಜಡೇಜಾ ಸ್ಪಿನ್ ಬಲೆಗೆ ಬಿದ್ದು, ರಹಾನೆಗೆ  ಕ್ಯಾಚಿತ್ತು ನಿರ್ಗಮಿಸಿದರು.

ಇದೀಗ ಇಂಗ್ಲೆಂಡ್ ತಂಡ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು, ಭಾರತದ ವಿರುದ್ಧ ಗೆಲ್ಲಬೇಕು ಎಂದರೆ ಸವಾಲಿನ ಮೊತ್ತ ಪೇರಿಸಬೇಕಿದೆ. ಇತ್ತೀಚಿನ ವರದಿಗಳು ಬಂದಾಗ ಇಂಗ್ಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದ್ದು, ಕೇವಲ  30 ರನ್ ಗಳ ಅಲ್ಪ ಮುನ್ನಡೆಯಲ್ಲಿದೆ. ಇಂಗ್ಲೆಂಡ್ ನ ಬಾಲಂಗೋಚಿ ಆಟಗಾರರು ಉತ್ತಮ ಪ್ರದರ್ಶನ ನೀಡದ ಹೊರತು ಇಂಗ್ಲೆಂಡ್ ತಂಡ ಈ ಪಂದ್ಯವನ್ನು ಉಳಿಸಿಕೊಳ್ಳುವುದು ಕಷ್ಟ ಸಾಧ್ಯ ಎಂದು ತಜ್ಞರು ಹೇಳುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com