
ಕೋಲ್ಕತ್ತಾ: ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 178 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ.
ಗೆಲ್ಲಲು 376 ರನ್ ಗಳ ಬೃಹತ್ ಮೊತ್ತ ಪಡೆದಿದ್ದ ನ್ಯೂಜಿಲೆಂಡ್ ದ್ವಿತೀಯ ಇನ್ನಿಂಗ್ಸ್ ನಲ್ಲಿ 197 ರನ್ ಗಳಿಗೆ ಆಲೌಟ್ ಆಗಿ ಟೀಂ ಇಂಡಿಯಾಗೆ ಶರಣಾಗಿದೆ.
ನ್ಯೂಜಿಲೆಂಡ್ ಆರಂಭಿಕರಾದ ಗಪ್ಟಿಲ್ ಹಾಗೂ ಲಾಥಮ್ ಉತ್ತಮ ಆರಂಭ ಒದಗಿಸಿದ್ದರು. ಆದರೆ ಆರ್ ಅಶ್ವಿನ್ ಅವರು ಉತ್ತಮವಾಗಿ ಆಡುತ್ತಿದ್ದ ಮಾರ್ಟಿನ್ ಗಪ್ಟಿಲ್(24) ಹಾಗೂ ಟಾಮ್ ಲೂಥಮ್(74) ವಿಕೆಟ್ ಕೀಳುವ ಮೂಲಕ ಭಾರತಕ್ಕೆ ಚೇತರಿಕೆ ನೀಡಿದರು. ಬಳಿಕ ಬಂದ ಇನ್ಯಾವ ಆಟಗಾರನು ಭಾರತೀಯರ ದಾಳಿ ಎದುರಿಸಲು ಸಾಧ್ಯವಾಗಲಿಲ್ಲ.
ಭಾರತದ ಪರ ಸ್ಪಿನ್ನರ್ ಗಳಾದ ಆರ್. ಅಶ್ವಿನ್, ರವೀಂದ್ರ ಜಡೇಜಾ ಹಾಗೂ ವೇಗಿ ಮೊಹಮ್ಮದ್ ಶಮಿ ತಲಾ 3 ವಿಕೆಟ್ ಪಡೆದು ಮಿಂಚಿದರು.
Advertisement