ಬಿಸಿಸಿಐನಿಂದ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಹಣ ಬಿಡುಗಡೆಗೆ ಸುಪ್ರೀಂ ನಿರ್ಬಂಧ

ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಹಣ ಬಿಡುಗಡೆ ಮಾಡದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಶುಕ್ರವಾರ ಸುಪ್ರೀಂಕೋರ್ಟ್ ನಿರ್ಬಂಧ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಹಣ ಬಿಡುಗಡೆ ಮಾಡದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಶುಕ್ರವಾರ ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿದೆ.
ಬಿಸಿಸಿಐ ಸುಧಾರಣೆ ಸಂಬಂಧ ಲೋಧಾ ಸಮಿತಿ ಮಾಡಿರುವ ಶಿಫಾರಸುಗಳನ್ನು ಜಾರಿ ಮಾಡದ ಹೊರತು ಯಾವುದೇ ರಾಜ್ಯ ಕ್ರಿಕೆಟ್ ಸಂಸ್ಥೆಗಳು ಬಿಸಿಸಿಐ ಹಣವನ್ನು ಪಡೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಅಲ್ಲದೆ ಈ ಲೋಧಾ ಸಮಿತಿ ಶಿಫಾರಸು ಜಾರಿಗೆ ತರುವ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಆದೇಶಿಸಿದೆ.
ಲೋಧಾ ಸಮಿತಿ ಶಿಫಾರಸು ಜಾರಿ ಸಂಬಂಧ ಅಂತರಾಷ್ಚ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ)ಯೊಂದಿಗೆ ನಡೆಸಿದ ಸಂಭಾಷಣೆಯ ವಿವರವನ್ನು ಕೋರ್ಟ್ ಗೆ ನೀಡುವಂತೆ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅವರಿಗೆ ಸೂಚಿಸಿದೆ.
ದಸರಾ ಹಿನ್ನೆಲೆಯಲ್ಲಿ ರಜಾ ಇರುವುದರಿಂದ ಲೋಧಾ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 17ಕ್ಕೆ ಮುಂದೂಡಿದೆ. 
ನ್ಯಾಯಮೂರ್ತಿ ಲೋಧಾ ಸಮಿತಿ ಮನವಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಈದಿನ ತನ್ನ ಆದೇಶವನ್ನು ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ವಿಚಾರಣೆಯನ್ನು ಮುಂದೂಡಿರುವುದರಿಂದ ಬಿಸಿಸಿಐಗೆ ಹೊಸ ನಿಯಮಾವಳಿಗಳ ಜಾರಿಗೆ ಇನ್ನೂ ಹೆಚ್ಚಿನ ಸಮಯ ಲಭಿಸಿದಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com