ನ್ಯೂಜಿಲೆಂಡ್‌ಗೆ 475 ಬೃಹತ್ ರನ್ ಟಾರ್ಗೆಟ್ ನೀಡಿದ ಭಾರತ

ಟೀಂ ಇಂಡಿಯಾ-ನ್ಯೂಜಿಲ್ಯಾಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ಗೆ 475 ರನ್ ಗಳ ಬೃಹತ್ ಟಾರ್ಗೆಟ್ ನೀಡಿದೆ...
ಭಾರತ
ಭಾರತ
ಇಂದೋರ್: ಟೀಂ ಇಂಡಿಯಾ-ನ್ಯೂಜಿಲ್ಯಾಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ಗೆ 475 ರನ್ ಗಳ ಬೃಹತ್ ಟಾರ್ಗೆಟ್ ನೀಡಿದೆ. 
ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ 216 ರನ್ ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು ಇದರೊಂದಿಗೆ ನ್ಯೂಜಿಲೆಂಡ್ ಪಂದ್ಯ ಗೆಲ್ಲಲು 476 ರನ್ ಗಳಿಸಬೇಕಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಸದ್ಯ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಇದೀಗ ಮೂರನೇ ಟೆಸ್ಟ್ ಪಂದ್ಯದ ಮೇಲೂ ಹಿಡಿತ ಸಾಧಿಸಿದ್ದು, ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವಿಪ್ ಮಾಡುವ ಹಾದಿಯಲ್ಲಿದೆ. 
ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 557 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಪ್ರಥಮ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲ್ಯಾಂಡ್ 299 ರನ್ ಗಳಿಗೆ ಸರ್ವಪತನ ಕಂಡಿತ್ತು. ಇದರೊಂದಿಗೆ ಭಾರತ 299 ರನ್ ಗಳ ಮುನ್ನಡೆ ಸಾಧಿಸಿತ್ತು. 299 ರನ್ ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಪ್ರಾರಂಭಿಸಿದ ಭಾರತ ವೇಗವಾಗಿ 3 ವಿಕೆಟ್ ನಷ್ಟಕ್ಕೆ 216 ರನ್ ಕಲೆ ಹಾಕಿ ನ್ಯೂಜಿಲೆಂಡ್ ಗೆ 475 ರನ್ ಗಳ ಸವಾಲು ನೀಡಿದೆ. 
ದ್ವಿತೀಯ ಇನ್ನಿಂಗ್ಸ್ ನಲ್ಲಿ ಗೌತಮ್ ಗಂಭೀರ್ ಅರ್ಧ ಶತಕ ಸಿಡಿಸಿದ್ದು, ಚೇತೇಶ್ವರ ಪೂಜಾರ 101 ರನ್ ಸಿಡಿಸಿದ್ದು ಭಾರತ ವೇಗವಾಗಿ 216 ರನ್ ಗಳಿಸಲು ಸಾಧ್ಯವಾಯಿತು. 
ಸದ್ಯ 475 ರನ್ ಗಳ ಬೃಹತ ಸವಾಲು ಪಡೆದು ದ್ವಿತೀಯ ಇನ್ನಿಂಗ್ಸ್ ಪ್ರಾರಂಭಿಸಿರುವ ನ್ಯೂಜಿಲೆಂಡ್ ಗೆ ಮೊದಲ ಆಘಾತವಾಗಿದೆ. ನ್ಯೂಜಿಲೆಂಡ್ ಪರ ಆರಂಭಿಕರಾಗಿ ಕಣಕ್ಕೀಳಿದ ಲ್ಯಾಥಮ್ 6 ರನ್ ಗಳಿಗೆ ಔಟಾಗಿದ್ದು, ನ್ಯೂಜಿಲೆಂಡ್ 1 ವಿಕೆಟ್ ನಷ್ಟಕ್ಕೆ 7 ರನ್ ಗಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com