ಪಾಕ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಭಾರತಕ್ಕೆ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಗದೆ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ರ್ಯಾಂಕಿಂಗ್ ನಲ್ಲಿ ಪಾಕಿಸ್ತಾನ(111) ತಂಡವನ್ನು 2ನೇ ಸ್ಥಾನಕ್ಕೆ ತಳ್ಳಿ ಅಧಿಕೃತವಾಗಿ ನಂಬರ್ 1 ಪಟ್ಟಕ್ಕೇರಿದ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ರ್ಯಾಂಕಿಂಗ್ ನಲ್ಲಿ ಪಾಕಿಸ್ತಾನ(111) ತಂಡವನ್ನು 2ನೇ ಸ್ಥಾನಕ್ಕೆ ತಳ್ಳಿ ಅಧಿಕೃತವಾಗಿ ನಂಬರ್ 1 ಪಟ್ಟಕ್ಕೇರಿದ ಭಾರತ(115) ಟೆಸ್ಟ್ ಚಾಂಪಿಯನ್ ಷಿಪ್ ಗದೆಯನ್ನು ಸ್ವೀಕರಿಸಿತು.

ಇಂಧೋರ್ ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಗೆದ್ದ ಬಳಿಕ ಪ್ರಶಸ್ತಿ ಪ್ರದಾನ ನಂತರ ಭಾರತದ ಮಾಜಿ ನಾಯಕ ಸುನೀಲ್ ಗವಾಸ್ಕರ್ ನಾಯಕ ವಿರಾಟ್ ಕೊಹ್ಲಿಗೆ ಗದೆ ನೀಡಿ ಗೌರವಿಸಿದರು.

ಟೀಂ ಇಂಡಿಯಾದ ಮಾಜಿ ಟೆಸ್ಟ್ ನಾಯಕ ಮಹೇಂದ್ರ ಸಿಂಗ್ ಧೋನಿ ನಂತರ ಗದೆ ಸ್ವೀಕರಿಸಿದ ಭಾರತದ 2ನೇ ಮತ್ತು ಒಟ್ಟಾರೆ 10ನೇ ನಾಯಕ ಎಂದೆನಿಸಿಕೊಂಡಿದ್ದಾರೆ ವಿರಾಟ್ ಕೊಹ್ಲಿ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com