3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಮೊಹಾಲಿಯಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಮೊಹಾಲಿ: ನ್ಯೂಜಿಲೆಂಡ್ ವಿರುದ್ಧ ಮೊಹಾಲಿಯಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಪಂಜಾಬ್ ನ ಮೊಹಾಲಿಯಲ್ಲಿರುವ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ  ಮಾಡಿಕೊಂಡಿದ್ದು, ಟಾಸ್ ಸೋತು ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆರಂಭಿಸಿದೆ.

ದೆಹಲಿಯಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯದಿಂದ ಸೋತಿರುವ ಭಾರತ ತಂಡ 3ನೇ ಏಕದಿನ ಪಂದ್ಯದಲ್ಲಿ ತಿರುಗೇಟು ನೀಡುವ ಉತ್ಸಾಹದಲ್ಲಿದೆ. ಅಂತೆಯೇ ಕಳೆದ  ಪಂದ್ಯದ ಗೆಲುವಿನ ಉತ್ಸಾಹದಲ್ಲಿರುವ ನ್ಯೂಜಿಲೆಂಡ್ 3ನೇ ಏಕದಿನ ಪಂದ್ಯ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ವಿಶ್ವಾಸದಲ್ಲಿದೆ. ಇತ್ತೀಚಿನ ವರದಿಗಳು ಬಂದಾಗ ನ್ಯೂಜಿಲೆಂಡ್ ತಂಡ 4.2  ಓವರ್ ನಲ್ಲಿ 24 ರನ್ ಗಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com