ನವದೆಹಲಿ: ಟೀಂ ಇಂಡಿಯಾದ ಸ್ಪೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಇನ್ಸ್ಟ್ರಾಗ್ರಾಮ್ ನಲ್ಲಿ ಅಭಿಮಾನಿಗಳ ಸಂಖ್ಯೆ 8 ಮಿಲಿಯನ್ ಮುಟ್ಟಿದ್ದು, ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.
ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣ ಇನ್ಸ್ಟ್ರಾಗ್ರಾಮ್ ನಲ್ಲಿ ಕಳೆದ ಎರಡು ವರ್ಷದಿಂದ ಸಕ್ರಿಯರಾಗಿದ್ದಾರೆ. ತಮ್ಮ ಸುಖ ದುಃಖದ ಸಂಗತಿಗಳನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಹಂಚಿಕೊಳುತ್ತಿದ್ದಾರೆ.
ಇದೀಗ ಅವರ ಅಭಿಮಾನಿಗಳ ಸಂಖ್ಯೆ 8 ಮಿಲಿಯನ್ ಏರಿಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ವಿರಾಟ್, ತಮ್ಮನ್ನು ಫಾಲೋ ಮಾಡುತ್ತಿರುವ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.