ಏಕದಿನ ರ್ಯಾಂಕಿಂಗ್: 2ನೇ ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ನೂತನ ಏಕದಿನ ಬ್ಯಾಟ್ಸ್ ಮನ್ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ ಟೆಸ್ಟ್ ಕ್ರಿಕೆಟ್ ತಂಡದ ನಾಯಕ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on: 

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ನೂತನ ಏಕದಿನ ಬ್ಯಾಟ್ಸ್ ಮನ್ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

887 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾದ ಸ್ಫೋಟದ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅಗ್ರಸ್ಥಾನದಲ್ಲಿದ್ದರೆ, 813 ಅಂಕಗಳನ್ನು ಪಡೆದಿರುವ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲೇ ಉಳಿದಿದ್ದಾರೆ.

ದಕ್ಷಿಣ ಆಫ್ರಿಕಾದ ಆಟಗಾರ ಹಾಶೀಮ್ ಆಮ್ಲಾ 778 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಭಾರತದ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಒಂದು ಸ್ಥಾನ ಕುಸಿದು ಏಳನೇ ಸ್ಥಾನಕ್ಕೆ ತೃಪ್ತಿಗೊಂಡಿದ್ದಾರೆ.

ಇಂಗ್ಲೆಂಡಿನ ಆಟಗಾರ ಜೋಯ್ ರೂಟ್ ನಾಲ್ಕನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ಆಟಗಾರ ಕೇನ್ ವಿಲಿಯಮ್ಸ್ ನ ಮತ್ತು ಮಾರ್ಟಿನ್ ಗುಪ್ಟಿಲ್ ಕ್ರಮವಾಗಿ ಐದು ಮತ್ತು ಆರನೇ ಸ್ಥಾನ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com