ಗಡಿಮೂಲಕ ಒಳನುಸುಳುತ್ತಿರುವ ಸೊಳ್ಳೆಗಳನ್ನು ನಿಯಂತ್ರಿಸಲು ಸರ್ಕಾರ ಅಸಮರ್ಥ: ಗೌತಮ್ ಗಂಭೀರ್

ಜಮ್ಮು ಕಾಶ್ಮೀರದ ಉರಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಗೌತಮ್ ಗಂಭೀರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ....
ಗೌತಮ್  ಗಂಭೀರ್
ಗೌತಮ್ ಗಂಭೀರ್

ನವದೆಹಲಿ: ಜಮ್ಮು ಕಾಶ್ಮೀರದ ಉರಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಗೌತಮ್ ಗಂಭೀರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಗಡಿ ಮೂಲಕ ನುಸುಳುತ್ತಿರುವ ಸೊಳ್ಳೆಗಳನ್ನು ನಿಯಂತ್ರಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ, ಸರ್ಕಾರ ಕಠಿಣ ಕ್ರಮಗಳನ್ನ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ಭಾರಿ ಮಳೆಯಿಂದಾಗಿ ದೆಹಲಿಯ ರಸ್ತೆಗಳು ಜಲಾವೃತವಾಗಿದ್ದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದ ಗಂಭೀರ್ ಉರಿ ಉಗ್ರರ ದಾಳಿ ಸಂಬಂಧ ಕಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ನಡೆದ ಮಾರಣಾಂತಿಕ ದಾಳೆ ಎಂದೇ ಪರಿಗಣಿಸಲಾಗುತ್ತಿದೆ. ಭಾನುವಾರ ಬೆಳಗ್ಗೆ ಉಗ್ರರು ಹಾಗೂ ಭಾರತೀಯ ಸೈನಿಕರ ನಡುವೆ ನಡೆದ ದಾಳಿ ಮತ್ತು ಪ್ರತಿದಾಳಿಯಿಂದಾಗಿ ಒಟ್ಟು 18 ಮಂದಿ ಸೈನಿಕರು ಹುತಾತ್ಮರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com