ಕೋಲ್ಕತ್ತಾ: ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿರುವ ಕೆಎಲ್ ರಾಹುಲ್ ಕೋಲ್ಕತ್ತಾ ಟೆಸ್ಟ್ ನಲ್ಲಿ ಆಡುವುದು ಡೌಟ್ ಆಗಿರುವುದರಿಂದ ಗೌತಮ್ ಗಂಭೀರ್ ಗೆ ಆಡಲು ಅವಕಾಶ ಸಿಗುವ ಸಾಧ್ಯತೆ ಇದೆ.
ಕೆಎಲ್ ರಾಹುಲ್ ಪ್ರಥಮ ಟೆಸ್ಟ್ ನ ದ್ವಿತೀಯ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಬಲ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ರಾಹುಲ್ ಬದಲಿಗೆ ಶಿಖರ್ ಧವನ್ ಫೀಲ್ಡಿಂಗ್ ಮಾಡಿದ್ದರು.
ರಾಹುಲ್ ಬದಲಿಗೆ ಉತ್ತಮ ಫಾರ್ಮ್ ನಲ್ಲಿರುವ ಗೌತಮ್ ಗಂಭೀರ್ ಅವರನ್ನು ತಂಡಕ್ಕೆ ಕರೆ ತರುವಲ್ಲಿ ಕೋಚ್ ಅನಿಲ್ ಕುಂಬ್ಳೆ ಆಸಕ್ತಿ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 30 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ ಲ್ಲಿ ಎರಡನೇ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ.