ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಫೈನಲ್ ಪಂದ್ಯ ಮೇ 21ರಂದು ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮೇ 21ರಂದು ಹೈದರಾಬಾದ್ ನಲ್ಲಿ ಫೈನಲ್, ಮೇ 16ರಂದು ಮೊದಲ ಕ್ವಾಲಿಫೈಯರ್ ಪಂದ್ಯ ಮುಂಬೈನ ವಾಂಖೆಡೆ ಮೈದಾನ, ಎಲಿಮಿನೆಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ಮೇ 17 ಮತ್ತು 19ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದೆ.
ಏಪ್ರಿಲ್ 2ರಿಂದ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದ್ದು, ಹೈದರಾಬಾದ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿವೆ.