ಹೈದರಾಬಾದ್: ಬಹು ನಿರೀಕ್ಷಿತ ಐಪಿಎಲ್ ಟಿ-20 ಹತ್ತನೆ ಆವೃತ್ತಿಗೆ ಹೈದರಾಬಾದ್ ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಅದ್ಧೂರಿ ಚಾಲನೆ ನೀಡಲಾಗಿದೆ.
ಇಂದು ಸಂಜೆ ಮುತ್ತಿನ ನಗರಿಯಲ್ಲಿ ಐಪಿಲ್ ಟೂರ್ನಿ ಉದ್ಘಾಟಿಸಿದ ಬಳಿಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ಮಾಜಿ ಕ್ರಿಕೆಟಿಗರಾದ ಸೌರವ್ ಗಂಗೂಲಿ ವೀರೇಂದ್ರ ಸೆಹ್ವಾಗ್ ಹಾಗೂ ವಿವಿಎಸ್ ಲಕ್ಷ್ಮಣ್ ಅವರಿಗೆ ಸನ್ಮಾನಿಸಲಾಯಿತು.
ಟೂರ್ನಿ ಉದ್ಘಾಟಿಸಿದ ನಂತರ ಮನರಂಜನಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಹಲವು ಕ್ರಿಕೆಟ್ ತಾರೆಯರು, ಸಿನಿಮಾ ನಟ ನಟಿಯರು ಸೇರಿದಂತೆ ನೂರಾರು ಸೆಲೆಬ್ರಿಟಿಗಳು ಭಾಗವಹಿಸಿದ್ದಾರೆ.
ರಾತ್ರಿ 8 ಗಂಟೆಗೆ ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಡುವೆ ಆರಂಭಿಕ ಪಂದ್ಯ ನಡೆಯಲಿದೆ.