ಬೆಂಗಳೂರು ತಂಡ ನೀಡಿದ್ದ 158 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ದೆಹಲಿ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 142 ರನ್ ಗಳನ್ನಷ್ಟೇ ಪೇರಿಸಲು ಶಕ್ತವಾಯಿತು. ಆ ಮೂಲಕ 15 ರನ್ ಗಳ ಅಂತರದಲ್ಲಿ ಆರ್ ಸಿಬಿ ತಂಡ ದೆಹಲಿ ವಿರುದ್ಧ ಸರಣಿಯ ತನ್ನ ಮೊದಲ ಗೆಲುವು ದಾಖಲಿಸಿತು. ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಪೇರಿಸಿತು. ಜಾಧವ್ (69 ರನ್)ಅವರ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ಬೆಂಗಳೂರು ತಂಡವನ್ನು ಕಡಿಮೆ ಮೊತ್ತಕ್ಕೆ ಕುಸಿಯುವ ಅಪಾಯದಿಂದ ಪಾರು ಮಾಡಿತು. ಉಳಿದಂತೆ ವಾಟ್ಸನ್ ಗಳಿಸಿದ 24 ರನ್ ಗಳೇ ಆರ್ ಸಿಬಿ ಪರ ಇತರೆ ಬ್ಯಾಟ್ಸ್ ಮನ್ ಗಳು ಗಳಿಸಿದ ಗರಿಷ್ಠ ಮೊತ್ತವಾಗಿತ್ತು.