ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ಮನೀಷ್ ಪಾಂಡೆ ಭರ್ಜರಿ ಬ್ಯಾಟಿಂಗ್ ನಿಂದಾಗಿ 7 ವಿಕೆಟ್ ನಷ್ಟಕ್ಕೆ 178 ರನ್ ಪೇರಿಸಿತು. 179 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಪಾರ್ಥಿವ್ ಪಟೇಲ್ 30, ಬಟ್ಲರ್ 28 ರನ್ ಗಳೊಂದಿಗೆ ಉತ್ತಮ ಆರಂಭ ಒದಗಿಸಿದರು. ನಂತರ ಬಂದ ನಿತೀಶ್ ರಾಣಾ 50 ರನ್ ಸಿಡಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.