ಎಬಿಡಿ ವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್ಸಿಬಿ ತಂಡ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತು. 149 ರನ್ ಗಳ ಗುರಿ ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ವೊಹ್ರಾ 34 ಮತ್ತು ಹಾಶೀಂ ಆಮ್ಲಾ 58 ರನ್ ಗಳಿಸಿ ಭದ್ರ ಬುನಾದಿ ಹಾಕಿದರು. ನಂತರ ಬಂದ ಗ್ಲೇನ್ ಮ್ಯಾಕ್ಸ್ ವೆಲ್ ಅಜೇಯ 43 ರನ್ ನೆರವಿನೊಂದಿಗೆ ಪಂಜಾಬ್ 14.3 ಓವರ್ ಗಳಲ್ಲಿ 150 ಸಿಡಿಸಿ ಗೆಲುವಿನ ನಗೆ ಬೀರಿತು.