ಭುಜದ ಗಾಯದ ಸಮಸ್ಯೆಗೆ ತುತ್ತಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್ 10ನೇ ಆವೃತ್ತಿಯಲ್ಲಿ ಆಡದೇ ಇರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಇದೀಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಏಪ್ರಿಲ್ 14ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಪಂದ್ಯದ ಮೂಲಕ ಕಣಕ್ಕೆ ಇಳಿಯಲಿದ್ದಾರೆ.