ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಅರ್ಧಶತಕ

ಭುಜದ ಗಾಯಕ್ಕೆ ತುತ್ತಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on: 
ಬೆಂಗಳೂರು: ಭುಜದ ಗಾಯಕ್ಕೆ ತುತ್ತಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ಕಣಕ್ಕಿಳಿದಿದ್ದು ಮೊದಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿದ್ದಾರೆ. 
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ ಮತ್ತು ಕ್ರಿಸ್ ಗೇಯ್ಲ್ ಪಂದ್ಯ ಆರಂಭಿಸಿದರು. 22 ರನ್ ಗಳಿಸಿದ್ದ ಕ್ರಿಸ್ ಗೇಯ್ಲ್ ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಅರ್ಧ ಶತಕ ಸಿಡಿಸಿದ್ದ ಕೊಹ್ಲಿ(62) ಮೆಕ್ಲನ್ ಘನ್ ಎಸೆತದಲ್ಲಿ ಬಟ್ಲರ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. 
ಮುಂಬೈ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಐಪಿಎಲ್ ಕ್ರಿಕೆಟ್ ನಲ್ಲಿ 27 ಅರ್ಧಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com